ಮೇ.31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಐಎಂಡಿ ಮಾಹಿತಿ ನೀಡಿದ್ದು, ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದಿದೆ.

ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ, ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಿರ್ಣಾಯಕ ತಿಂಗಳುಗಳು. ಈ ನಾಲ್ಕು ತಿಂಗಳು ಮಳೆಗಾಲಕ್ಕೆ ಉತ್ತಮ ವೇದಿಕೆ. ಈ ಬಾರಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ನಗರದಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆ ಮತ್ತು ಬಲವಾದ ಮೇಲ್ಮೈ ಗಾಳಿಯ ಹೆಚ್ಚಿನ ಸಾಧ್ಯತೆ: ಐಎಂಡಿ

ಮುಂಗಾರು ಮಾರುತಗಳು ಜೂನ್‌ 2 ಅಥವಾ 3 ರಂದು ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಹೀಗಾಗಿ ಹವಾಮಾನ ಇಲಾಖೆ ಅಧಿಕಾರಿಗಳು ಕೂಡ ಮುಂಗಾರು ಮಾರುತಗಳ ಚಲನವಲನ ಪರಿಶೀಲನೆ ಮಾಡಿ, ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

ವಿವಿಧ ವ್ಯವಸ್ಥೆಗಳ ಪ್ರಗತಿ ಮತ್ತು ಹೊಸ ವ್ಯವಸ್ಥೆಗಳ ರಚನೆಯೊಂದಿಗೆ, ಮುಂಗಾರು ಪ್ರಾರಂಭವಾಗುವ ಸಾಧ್ಯತೆಯಿದೆ. ಮೇ 30 ರೊಳಗೆ ಕೇರಳ ಮತ್ತು ಮೇ 31 ರ ವೇಳೆಗೆ ಕರ್ನಾಟಕವನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಮಾನ ಇಲಾಖೆಯ ನಿರ್ದೇಶಕ ಎನ್ ಪುವಿಯರಸನ್ ಹೇಳಿದ್ದಾರೆ.

2023 ರಲ್ಲಿ, ಜೂನ್‌ನಿಂದ ಸೆಪ್ಟೆಂಬರ್‌ವರೆಗೆ 831.8 ಮಿಮೀ ಸಾಮಾನ್ಯ ಮಳೆಗೆ ವಿರುದ್ಧವಾಗಿ ರಾಜ್ಯದಲ್ಲಿ 678.4 ಮಿಮೀ ಮಳೆಯಾಗಿದೆ. ಇದರಿಂದ ಮಳೆ ಕೊರತೆ ಶೇ.18 ರಷ್ಟು ಆಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೇ 31ರವರೆಗೆ  40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗ 65 ಕಿಮೀ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಯುಭಾರ ಕುಸಿತದಿಂದ ಚಂಡಮಾರುತ ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ 34-47 ನಾಟ್ ಜೊತೆಗೆ ಸೈಕ್ಲೋನಿಕ್ ಚಂಡಮಾರುತ ‘ರೆಮಲ್’ ಆಗಿ ಮತ್ತಷ್ಟು ತೀವ್ರಗೊಳ್ಳುತ್ತದೆ. ನಂತರ ಉತ್ತರ ಭಾಗಕ್ಕೆ ಚಲಿಸುತ್ತದೆ, ಇಂದು ರಾತ್ರಿ ವೇಳೆಗೆ ಚಂಡಮಾರುತ ತೀವ್ರಗೊಳ್ಳಲಿದೆ (48-63 ಕೆಟಿ) ಎಂದು ತಿಳಿಸಿದೆ.

ಇದನ್ನೂ ನೋಡಿ: ಬಿಜೆಪಿ ಸೋತರೆ, ಮೋದಿ ಸುಲಭವಾಗಿ ಅಧಿಕಾರ ಬಿಟ್ಟುಕೊಡುವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *