ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ಪೊಲೀಸ್ ವಶದಲ್ಲಿರುವ ಆರೋಪಿಗಳಾಗಿದ್ದಾರೆ. ಈ ನಾಲ್ವರು ಭಜರಂಗದಳ ಸಂಘಟನೆ ಕಾರ್ಯಕರ್ತರಾಗಿದ್ದಾರೆಂದು ತಿಳಿದುಬಂದಿದೆ. ಮೂವರು ಕೇರಳ ಗಡಿಭಾಗ ತಲಪಾಡಿ ಅವರಾಗಿದ್ದರೆ, ಓರ್ವ ಉಳ್ಳಾಲ ಬಸ್ತಿಪಡ್ಪು ನಿವಾಸಿಯಾಗಿದ್ದಾನೆ.
An incident of #moralpolicing reported at someshwar beach in #Mangalore. Three #Muslim youths assaulted for hanging out with female #Hindu friends. All are reportedly medical students & 4m #kerala studying there. Cops inform no case regd yet. More details awaited-#Karnataka pic.twitter.com/lBMdtSWYAv
— Imran Khan (@KeypadGuerilla) June 1, 2023
ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್ , ಆಶಿಕ್ ಹಲ್ಲೆಗೊಳಗಾದ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ವಿಹಾರಕ್ಕಾಗಿ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ಆಗಮಿಸಿದ್ದರು.
ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಅನ್ಯ ಧರ್ಮಯ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ತಂಡ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.