ಬೀದರ್: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಊಟದಲ್ಲಿ ಹುಳು ಪ್ರತ್ಯಕ್ಷವಾಗಿದ್ದು, ಇದನ್ನು ಪ್ರಶ್ನೆ ಮಾಡಿದಕ್ಕೆ ವಿದ್ಯಾರ್ಥಿಗೆ ಥಳಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಘಟನೆ ಔರಾದ್ ತಾಲೂಕಿನ ಸಂತಪೂ ಗ್ರಾಮದಲ್ಲಿರೋ ವಸತಿ ಶಾಲೆಯಲ್ಲಿ ನಡೆದಿದೆ.
ಕಳಪೆ ಗುಣಮಟ್ಟದ ಆಹಾರ ನಿತ್ಯ ಕಳಪೆ ಆಹಾರ ನೀಡುತ್ತಿದ್ದು, ಇದಕ್ಕೆ ಬೇಸತ್ತ ವಿದ್ಯಾರ್ಥಿಗಳು ಊಟದ ಕುರಿತು ಪ್ರಶ್ನೆ ಮಾಡಿದ್ದಾರೆ. ಈ ರೀತಿ ಪ್ರಶ್ನೆ ಮಾಡಿದಕ್ಕೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೇಲೆ ವಾರ್ಡನ್ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಿನ್ಸಿಪಾಲ್ ಹಾಗೂ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ. ಪ್ರಿನ್ಸಿಪಾಲ್ ಭಗವಂತ್ ಕಾಂಬಳೆ ಹಾಗೂ ವಾರ್ಡನ್ ಶಿವಕುಮಾರ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ : ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು; ಪ್ರಾಂಶುಪಾಲೆ ಅಮಾನತು
ವಸತಿ ಶಾಲೆ ಆವರಣದಲ್ಲೇ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಅಮಾನುಷವಾಗಿ ವಾರ್ಡನ್ ಥಳಿಸಿದ್ದಾನೆ ಎಂಬ ಮಾತು ಕೇಳಿ ಬರುತ್ತಿದೆ. ವಿದ್ಯಾರ್ಥಿಗಳ ಕೈ, ಬೆನ್ನಿಗೆ ಹಾಸ್ಟೆಲ್ ಮೇಲ್ವಿಚಾರಕ ಹೊಡೆದಿದ್ದಾನೆ ಎನ್ನಲಾಗುತ್ತಿದೆ. ಇನ್ನು ಈ ವಸತಿ ಶಾಲೆಯಲ್ಲಿ 5-10ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಇದನ್ನೂ ನೋಡಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡ: ಹಿಂದುಳಿದ ಜಾತಿಗಳ ಒಕ್ಕೂಟ ಮನವಿ Janashakthi Media