ಬೆಂಗಳೂರು | ಪೌರಕಾರ್ಮಿಕರ ಸುರಕ್ಷತೆಗೆ ಹೆಚ್ಚು ಗಮನಹರಿಸಿ – ಆಯುಕ್ತ ಡಾ. ರಾಜೇಂದ್ರ ಕೆ.ವಿ

ಬೆಂಗಳೂರು: ಪೌರಕಾರ್ಮಿಕರ ಸುರಕ್ಷತೆಗೆ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಆದ್ಯತೆ ನೀಡುವಂತೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರಕಾರ್ಮಿಕರ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಅವರ ಅಹವಾಲುಗಳನ್ನು ಖುದ್ದಾಗಿ ಆಲಿಸಿದರು. ಯಡಿಯೂರು ಉಪವಿಭಾಗ ವ್ಯಾಪ್ತಿಯಲ್ಲಿ ಇಂದು ನಾಗರಿಕರಿಗೆ ಮೂಲಸೌಕರ್ಯ ಹಾಗೂ ನೀಡುತ್ತಿರುವ ಸೇವೆಗಳ ಸ್ಥಿತಿಗತಿಗಳನ್ನು ಪರಿಶೀಲಿಸುವ ವೇಳೆ, ಎಲ್ಲಾ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಇದನ್ನೂ ಓದಿ : ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ

ಮಸ್ಟರಿಂಗ್ ಸ್ಥಳ ಪರಿಶೀಲನೆ ವೇಳೆ ಪೌರಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿ, ಸಮಯಪಾಲನೆ ಮಾಡುವಂತೆ ಪೌರಕಾರ್ಮಿಕರಿಗೆ ಸೂಚಿಸಿದರು. ಅಲ್ಲದೇ, ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಕಲ್ಯಾಣ ಸೌಲಭ್ಯಗಳು ದೊರೆಯುವಂತೆ ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜೈವಿಕ ಅನಿಲ ಘಟಕ, ಸಾರ್ವಜನಿಕ ಉದ್ಯಾನವನಗಳು, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ನಾಷಿಯಂ ಹಾಗೂ ಗೊಬ್ಬರ ತಯಾರಿಕಾ ಘಟಕಗಳನ್ನು ಪರಿಶೀಲಿಸಿದರು.

ಈ ವೇಳೆ ಮುಖ್ಯ ಅಭಿಯಂತರರಾದ ವಿಶ್ವನಾಥ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ : ಕೊಂದವರು ಯಾರು? ಅಭಿಯಾನವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ – ಜ್ಯೋತಿ ಎ Janashakthi

 

 

Donate Janashakthi Media

Leave a Reply

Your email address will not be published. Required fields are marked *