ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯು ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಖುಷಿಯಲ್ಲಿದ್ದ ಆಟೋ ಚಾಲಕರಿಗೆ ಶಾಕ್ ನೀಡಿದ್ದು, ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.
ಸರ್ಕಾರ ಇತ್ತೀಚೆಗೆ ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿಯನ್ನ ಬ್ಯಾನ್ ಮಾಡಿತ್ತು. ಇದರ ಬೆನ್ನಲ್ಲೇ ಆಟೋ ಚಾಲಕರು ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಬೆಂಗಳೂರು
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಪಿಡಿಒಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣಬೈರೇಗೌಡ
ಇದೇ ವಿಚಾರವಾಗಿ ನಿಯಮ ಬಾಹಿರವಾಗಿ ನಡೆದುಕೊಳ್ಳುವ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಸಿದ್ದರು.
ಆದಾಗ್ಯೂ ನಗರದಲ್ಲಿ ನಿಯಮ ಬಾಹಿರವಾಗಿ ಆಟೋಗಳಲ್ಲಿ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರ ವಿರುದ್ಧ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಆಟೋ ಚಾಲಕರಿಗೆ ಆರ್ಟಿಓ ಅಧಿಕಾರಿಗಳು ಶಾಕ್ ನೀಡಿದ್ದು, ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.
ಇದನ್ನೂ ನೋಡಿ: ವಚನಾನುಭವ 30| ಅಲ್ಲಮನ ವಚನ | ಅರಿವಿನ ಜಾಗೃತಿ – ಡಾ. ಮೀನಾಕ್ಷಿ ಬಾಳಿ Janashakthi Media
