ಚಿಕ್ಕಮಗಳೂರು: ಮನುಷ್ಯರ ಅಮಾನವೀಯ ಕೃತ್ಯಕ್ಕೆ ಮಂಗಗಳ ಹತ್ಯೆ ನಡೆದಿದ್ದು, ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು ಬಳಿಕ 30 ಮಂಗಗಳನ್ನ ಕೊಂದ ಹಾಕಿರುವ ಅಮಾನವೀಯ ಘಟನೆ ನಡೆದಿದೆ.
ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ 30 ಮಂಗಗಳನ್ನು ಹತ್ಯೆಗೈದ ಅಮಾನವೀಯ ಕೃತ್ಯ ಚಿಕ್ಕಮಗಳೂರಿನ ಎನ್‌ಆರ್‌ಪುರದ ಬಳಿ ನಡೆದಿರುವುದು ವರದಿಯಾಗಿದೆ. ಸತ್ತ ಮಂಗಗಳ ತಲೆಯಲ್ಲಿ ಒಂದೇ ರೀತಿಯ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಬಾಳೆಹಣ್ಣು ತಿಂದು ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು 16 ಗಂಡು, 14 ಹೆಣ್ಣು ಹಾಗೂ 4 ಮರಿಗಳನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ : ಇಲಿ ಬಿದ್ದ ಪಲ್ಯ ಸೇವನೆ : ಇತ್ತ ಫುಡ್ ಪಾಯಿಸನ್ ನಿಂದ ವಿದ್ಯಾರ್ಥಿಗಳು ಅಸ್ವಸ್ಥ
ಘಟನೆ ಬಳಿಕ ಸ್ಥಳಕ್ಕೆ ಡಿಎಫ್‌ಓ, ಆರ್‌ಎಫ್‌ಓ, ಪಿಎಸ್‌ಐ, ಪಶುವೈದ್ಯರು, ಪಂಚಾಯ್ತಿ, ಆಶಾ ಕಾರ್ಯಕರ್ತೆಯರು ಸೇರಿ ವಿವಿಧ ಇಲಾಖೆಯ ಎಲ್ಲ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್‌ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಗಳ ಕೊಲೆ ಕಾರಣ ತಿಳಿದುಬಂದಿಲ್ಲ. ತೋಟದ ಬೆಳೆ ನಾಶ ಮಾಡುತ್ತವೆಂದು ಕೊಂದಿರಬಹುದಾ? ಅಥವಾ ಬೇರೆ ಏನಾದರೂ ಕಾರಣ ಇದ್ದಿರಬಹುದಾ? ಒಟ್ಟಿನಲ್ಲಿ ಮೂಕ ಪ್ರಾಣಿಗಳನ್ನ ರೀತಿ ಮನುಷ್ಯತ್ವಹೀನರಂತೆ ಹೊಡೆದುಕೊಂದಿರುವುದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.