ಬ್ರ್ಯಾಂಡ್ ಬೆಂಗಳೂರು ಅಭಿಯಾನಕ್ಕೆ 70 ಸಾವಿರಕ್ಕೂ ಹೆಚ್ಚು ಸಲಹೆ:ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಕುರಿತು ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಕಳೆದ ಒಂದು ತಿಂಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ:ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಣ!

ನಗರದ ಸಪ್ನ ಬುಕ್‌ ಹೌಸ್‌ ಪ್ರಸ್ತುತಪಡಿಸಿದ ದೊಡ್ಡೇಗೌಡ ಮತ್ತು ಆರ್‌ಎನ್‌ ಚಂದ್ರಶೇಖರ್‌ ರಚಿಸಿದ ‘ಬೆಂಗಳೂರು ಅಂದು ಮತ್ತು ಈಗ’ ಪುಸ್ತಕವನ್ನು ಶನಿವಾರ ಅನಾವರಣಗೊಳಿಸಿದ ಬಳಿಕ ಉಪ ಮುಖ್ಯಮಂತ್ರಿಗಳು ಮಾತನಾಡಿದಕ ಅವರು, ಬೆಂಗಳೂರು ನಗರ ಸಾಕಷ್ಟು ಬದಲಾಗಿದ್ದು, ನಗರ ಬೆಳೆದಂತೆ ಹೊಸ ಹೊಸ ಸವಾಲುಗಳು ಎದುರಾಗುತ್ತಿದೆ ಎಂದು ತಿಳಿಸಿದರು.

2013ರ ನಂತರ ಈ ರಸ್ತೆಗಳ ಅಗಲೀಕರಣ ಕಷ್ಟವಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದೀಗ ಬೆಂಗಳೂರಿಗೆ ಹೊಸ ರೂಪ ಕೊಡಲು ಪ್ರಯತ್ನ ನಡೆಸಲಾಗುತ್ತಿದ್ದು, ಸವಾಲುಗಳು ಎದುರಾಗುತ್ತಿವೆ ಎಂದರು.

ಇದಕ್ಕಾಗಿ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಅಭಿಯಾನವನ್ನು ಆರಂಭಿಸಿತ್ತು. ಬೆಂಗಳೂರು ಪರಿವರ್ತನೆಗೆ ಸಲಹೆಗಳನ್ನು ಕೇಳಿದ್ದೆವುತ ಇದಕ್ಕಾಗಿ 70,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಮಕ್ಕಳಿಂದಲೂ ಅಭಿಪ್ರಾಯ ಪಡೆಯಲಾಗುತ್ತಿದೆ. ಈ ಎಲ್ಲಾ ಸಲಹೆಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಹಾಗೂ ದರ ಪರಿಷ್ಕರಣೆ ಕುರಿತು ಮಾತನಾಡಿ, ನಗರದಲ್ಲಿ ಶೇ.32ರಷ್ಟು ನೀರು ವ್ಯರ್ಥವಾಗುತ್ತಿದೆ. ಈ ಕುರಿತು ಕ್ರಮಕೈಗೊಳ್ಳಲಾಗುತ್ತಿದೆ. 2014ರಿಂದಲೂ ನೀರಿನ ದರ ಪರಿಷ್ಕರಣೆ ಆಗಿರಲಿಲ್ಲ. ಇದರಿಂದಾಗಿ BWSSB ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಗರದಲ್ಲಿ ಇಂತಹ ಹಲವು ಆಂತರಿಕ ಸಮಸ್ಯೆಗಳಿವೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *