ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ| ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಆಕ್ರೋಶ

ರಾಮನಗರ: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್‌ ಆರಂಭವಾಗಿದ್ದು, ರೈತರು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಆರಂಭಿಸಿದ್ದಾರೆ.ಪ್ರತಿಭಟನೆ.ರಾಮನಗರದಲ್ಲಿ 

ಇದನ್ನೂ ಓದಿ:ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ – ಪ್ರತಿಭಟನೆಕಾರರ ಬಂಧನ, ಸೆಕ್ಷನ್ 144 ಜಾರಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಸೆ-26 ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಬಾಯಿ ಬಡಿದುಕೊಂಡು ಸ್ಟಾಲಿನ್ ಸತ್ತೋದ ಎಂದು ಆಕ್ರಂದನ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ಧ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ‌ ನಡೆಸಿದ್ದಾರೆ.

ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ರಾಜ್ಯದ ಜನರ ಹಿತವನ್ನು ಬಲಿ ಕೊಡುವ ಬದಲು, ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕು. ನಾಡಿನ ಜೀವನದಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದರು.

ವಿಡಿಯೋ ನೋಡಿ:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಬೃಹತ್‌ ಪ್ರತಿಭಟನೆ, ಮಂಡ್ಯ ಮದ್ದೂರು ಬಂದ್‌ Janashakthi Media

Donate Janashakthi Media

Leave a Reply

Your email address will not be published. Required fields are marked *