ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿದ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ, “ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ. ತೀರಾ ದುರ್ಬಲ ವ್ಯಕ್ತಿಯಾದ ಆತನಿಗೆ ಅಸೂಯೆ ಹೆಚ್ಚು. ಮತ್ತೊಬ್ಬರ ಬೆಳವಣಿಗೆಯನ್ನು ಸಹಿಸುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.
ಸಂದೀಪ್ ರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದು, ಅವರ ನೇಮಕವನ್ನು ತಡೆ ಹಿಡಿಯಲಾಗಿದೆ. ಅವರು ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಕೋವಿಡ್ ಹಗರಣದ ತನಿಖೆ ನಡೆಸುತ್ತಿರುವ ಮೈಕಲ್ ಕುನ್ಹಾ ಅವರು ಸಮಯ ನೀಡಿದರೆ ಕೋವಿಡ್ ಅಕ್ರಮದ ಬಗೆಗಿನ ದಾಖಲೆಗಳನ್ನು ನೀಡುವೆ. ಚೆನ್ನೈನ ಮೈಕ್ರೊ ಫೈನಾನ್ಸ್ ಒಂದಕ್ಕೆ ಹಣ ವರ್ಗಾವಣೆ ಆಗಿದೆ ಎಂದರು.
ಇದನ್ನೂ ಓದಿ: ಭಾರತದ ರೂಪಾಯಿ ಕುಸಿತ; ವಿವಿಧ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ
ಸುಧಾಕರ್ ಪಾಪದ ಹೊರೆ ಹೆಚ್ಚಿದೆ. ನಾನು ವಿಧಾನಸಭೆ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿಲ್ಲ. ತಟಸ್ಥವಾಗಿ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಅವರ ಪರವಾಗಿ ಕೆಲಸ ಮಾಡಿದ್ದೇನೆ. ಎಲ್ಲಿ ಬೇಕಾದರೂ ಪ್ರಮಾಣ ಮಾಡಲು ಸಿದ್ಧ ಎಂದರು.
2007ರಿಂದಲೂ ಸುಧಾಕರ್ ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾನೆ. ನನ್ನ ಪರವಾಗಿ ಬಿಜೆಪಿಯ ಹಲವು ಮುಖಂಡರು ಇದ್ದಾರೆ. ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ. ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಿದರೂ ಕೆಲಸ ಮಾಡುವೆ. ಕಾರ್ಯಕರ್ತನಾಗಿಯೂ ಕೆಲಸ ಮಾಡುವೆ ಎಂದರು.
ಇದನ್ನೂ ನೋಡಿ: ರೈತ ನಾಯಕ ವಿಜೂ ಕೃಷ್ಣನ್ ಕೇಂದ್ರ ಬಜೆಟ್‌ಗೆ ಸೊನ್ನೆ ಅಂಕ ಕೊಟ್ಟಿದ್ಯಾಕೆ? Janashakthi Media