ಹಾಸನ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ಸಣ್ಣ ತೀರ್ಮಾನ ಮಾಡಿದ್ದೇನೆ’ ಎಂದಿರುವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ
ಇದನ್ನೂ ಓದಿ:ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ. ಸದಾನಂದಗೌಡ ರಾಜೀನಾಮೆ
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು. ಈಗ ಅವರು ಹಾಸನದಲ್ಲಿ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ 30 ವರ್ಷ ಎಲ್ಲವನ್ನೂ ಕೊಟ್ಟಿದೆ. ಬಿಎಸ್ ಯಡಿಯೂರಪ್ಪ ಬಿಟ್ಟರೆ ಇಷ್ಟು ಲಾಭ ಆಗಿರೋದು ನಾನೇ. ಸಿಎಂ, ಸಂಸದ, ಮೋದಿ ಜೊತೆ ಕ್ಯಾಬಿನೇಟ್ ಮಂತ್ರಿ, ಸಚಿವ ಸ್ಥಾನ, ವಿರೋಧಿ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಎಲ್ಲವೂ ನನಗೆ ಸಿಕ್ಕಿದೆ. ಆದ್ದರಿಂದ ಚುನಾವಣಾ ರಾಜಕೀಯದಲ್ಲಿ ಮುಂದುವರೆಯಬಾರದು ಅಂತ ತೀರ್ಮಾನ ಎಂದು ಹೇಳಿದ್ದಾರೆ.