ಲೋಕಸಭಾ ಚುನಾವಣೆ 2024| ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ – ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

Please follow and like us:

ಬೆಂಗಳೂರು :ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ನ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಲೋಕಸಭಾ

 

 

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ

ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌

ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌

ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ

ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ

ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ

ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌

ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌

ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ

ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌

ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌

ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌

ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

ಸಚಿವರ ಮಕ್ಕಳಿಗೆ ಮಣೆ

ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್​ ಖಂಡ್ರೆಗೆ ಬೀದರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಗ ಮೃಣಾಲ್ ಹೆಬ್ಬಾಳ್ಕರ್‌, ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ, ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಟಿಕೆಟ್, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್‌ ಅವರಿಗೆ ಬಾಗಲಕೋಟೆ ಲೋಕಸಭಾ ಟಿಕೆಟ್ ನೀಡಲಾಗಿದೆ.

ಬಳ್ಳಾರಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಕಿ ಇದೆ.

ಉಳಿದಂತೆ ಅರುಣಾಚಲ ಪ್ರದೇಶ-2, ಗುಜರಾತ್‌- 11, ಮಹಾರಾಷ್ಟ್ರ- 7, ರಾಜಸ್ಥಾನ- 6, ತೆಲಂಗಾಣ- 5, ಪಶ್ಚಿಮ ಬಂಗಳಾ- 8, ಪುದುಚೇರಿ-1 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದೆ.

ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ (ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರಕ್ಕೆ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಕಣಕ್ಕಿಳಿಸಿದೆ.

 

Please follow and like us:
Donate Janashakthi Media

Leave a Reply

Your email address will not be published. Required fields are marked *