“ಸೋಲುವ ಭೀತಿಯಿಂದ ಸ್ಪರ್ಧಿಸಲು ಸಚಿವರು ಭಯಪಡುತ್ತಿದ್ದಾರೆ” ಕಾಂಗ್ರೆಸ್‌ಗೆ ಕುಟುಕಿದ ಮಾಜಿ ಸಿಎಂ ಲೋಕಸಭಾ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಲೋಕಸಭಾ
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪಕ್ಷದ ವರಿಷ್ಠರು ನಿರ್ಣಯ ಮಾಡಿ ಪ್ರಕಟಣೆ ಮಾಡಿದ್ದಾರೆ. ಸದಾಕಾಲ ರಾಜಕೀಯವಾಗಿ ಆಶಿರ್ವಾದ ಮಾಡಿ ಯಡಿಯೂರಪ್ಪ ಅವರು ಹರಸಿದ್ದಾರೆ. ಅವರ ಆಶಿರ್ವಾದ ಪಡೆದಿದ್ದೇನೆ. ಪ್ರಚಾರಕ್ಕೂ ಕೂಡ ಬರುತ್ತೇನೆ ಅಂತ ಹೇಳಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ : ಬಿಜೆಪಿ ಎರಡನೇ ಪಟ್ಟಿ ಪ್ರಕಟ; ಕರ್ನಾಟಕದ 20 ಕ್ಷೇತ್ರಗಳ ಪಟ್ಟಿ ಪ್ರಕಟ – ಸಿಂಹ, ಕಟೀಲ್, ಗೌಡಗೆ ಕೋಕ್
ಈ ಬಾರಿ ಅಭ್ಯರ್ಥಿಗಳ ಆಯ್ಕೆ ವಿನೂತನ ರೀತಿಯಾಗಿದೆ. ಡಾ. ಮಂಜುನಾಥ್ ಅವರು ಲಕ್ಷಾಂತರ ಜನರಿಗೆ ಆರೋಗ್ಯ ಕಾಪಾಡಿದ್ದಾರೆ. ಒಳ್ಳೆಯ ಕೆಲಸ ಮಾಡಿದವರಿಗೆ ಪಕ್ಷ ಪುರಸ್ಕಾರ ನೀಡುತ್ತದೆ ಅನ್ನುವ ಸಂದೇಶ ನೀಡಿದೆ. ಮತ್ತೆ ಮಹಾರಾಜ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕದಲ್ಲಿ ಒಳ್ಳೆಯ ಸಂದೇಶ ನೀಡಿದಂತಾಗಿದೆ.
ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಗಿದ್ದರೆ ಅದಕ್ಕೆ ಒಡೆಯರ್ ಅವರು ಕಾರಣ. ಅವರು ಹಿಂದುಳಿದ ವರ್ಗದವರ ಅಭಿವೃದ್ಧಿ ಮಾಡಿದ್ದಾರೆ. ಆ ಮನೆತನಕ್ಕೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕಕ್ಕೆ ಸಂತಸ ತಂದಿದೆ. ಹಳೆ ಬೇರು, ಹೊಸ ಚಿಗುರಿಗೂ ಅವಕಾಶ ನೀಡಿದೆ. ಈ ರೀತಿ ನಿರ್ಣಯ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.
ಕಾಂಗ್ರೆಸ್ ನಲ್ಲಿ ಆ ಪರಿಸ್ಥಿತಿ ಇಲ್ಲ. ಸಚಿವರೂ ಸೋಲುವ ಭಯದಲ್ಲಿ ಇದ್ದಾರೆ. ಟಿಕೆಟ್ ಸಿಗದ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನುವುದು ಡಿಸಿಎಂ ಡಿಕೆಶಿವಕುಮಾರ್ ಅವರ ಚಾಳಿಯಾಗಿದೆ. ಅವರ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದರು. ಲೋಕಸಭಾ
ವಿಡಿಯೋ ನೋಡಿ : ಸುಳ್ಳು ಹೇಳುವ ಜ್ಯೋತಿಷ್ಯವನ್ನು ದಿಕ್ಕರಿಸಿವಿಜ್ಞಾನವನ್ನು ನಂಬಿ, ಬೆಳಸಿ – ಎಂಆರ್‌ಎನ್ ಮೂರ್ತಿ Janashakthi Media