ಅಭಿವೃದ್ಧಿ ದೃಷ್ಟಿಕೋನದಿಂದ ಮೈಸೂರಿನಿಂದ ಸ್ಪರ್ಧೆ- ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರು: ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾಗಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಇನ್ನು ಪ್ರತಾಪ್ ಸಿಂಹ ಅವರ ಬಗ್ಗೆ ಮಾತನಾಡಿ, ಸಾರ್ವಜನಿಕ ಬದುಕಿಗೆ ಬಂದ ಮೇಲೆ ಸಾರ್ವಜನಿಕವಾಗಿ ಇರಬೇಕಾಗುತ್ತದೆ. ಅವರು ನನ್ನನ್ನು ಸಹೋದರನ ರೀತಿಯಲ್ಲಿ ನೋಡಿದ್ದಾರೆ‌. ಪ್ರತಾಪ್ ಸಿಂಹ ಎರಡು ಅವಧಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಕ್ಷೇತ್ರದಲ್ಲಿ ಒಳ್ಳೆಯ ಅಡಿಪಾಯ ಹಾಕಿದ್ದಾರೆ. ಅವರ ಸಹಕಾರ ಇದ್ದರೆ ನನಗೆ ಅನುಕೂಲ ಆಗುತ್ತದೆ. ಅವರು ಉತ್ತಮ ಅಭಿವೃದ್ಧಿ ಕಾರ್ಯ ಮಾಡ್ತಾ ಇದ್ದಾರೆ ಎಂದರು‌.

ಇದನ್ನೂ ಓದಿಬಿಜೆಪಿ ಎರಡನೇ ಪಟ್ಟಿ ಪ್ರಕಟ; ಕರ್ನಾಟಕದ 20 ಕ್ಷೇತ್ರಗಳ ಪಟ್ಟಿ ಪ್ರಕಟ – ಸಿಂಹ, ಕಟೀಲ್, ಗೌಡಗೆ ಕೋಕ್

ನ್ನು ಯದುವೀರ್ ಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,‌ ಮೈಸೂರು ರಾಜಮನೆತನದ ಬಗ್ಗೆ ಹಳೆ ಮೈಸೂರು ಭಾಗದಲ್ಲಿ ಗೌರವ ಪ್ರೀತಿ ಇದೆ. ವಿಶ್ವದಲ್ಲಿ ಸರ್ವಸ್ವವನ್ನೂ ಸಮರ್ಪಿಸಿ ಪ್ರಜಾ ಸೇವೆ ಮಾಡಿದ ಕೀರ್ತಿ ಯದುವಂಶಕ್ಕೆ ಸಲ್ಲುತ್ತದೆ ಎಂದರು. ಯದುವಂಶದ ಯದುವೀರ್ ಗೆ ಟಿಕೆಟ್ ಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಕೆ ಮಾಡುತ್ತೇನೆ ಎಂದರು.

ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಶಾಸಕ ಶರಣು ಸಲಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ವಿಡಿಯೋ ನೋಡಿಜೋಯಿಡಾ ಅಭಿವೃದ್ಧಿಗಾಗಿ ರೈತರ ಪಾದಯಾತ್ರೆ Janashakthi Media

 

 

Donate Janashakthi Media

Leave a Reply

Your email address will not be published. Required fields are marked *