ಕೋವಿಡ್‌ ಕೇಂದ್ರದಲ್ಲಿ ಹೋಮ: ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: ನಿಯಮಗಳನ್ನು ಉಲ್ಲಂಘನೆ ಮಾಡಿರುವ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕು ಅರಬಗಟ್ಟೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಹೋಮ ನಡೆಸಿದ್ದರ ವಿರುದ್ಧ ಎಂ ಪಿ ರೇಣುಕಾಚಾರ್ಯ ಅವರ ಮೇಲೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಅವರು ತಹಶೀಲ್ದಾರರಿಗೆ ಸೂಚಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿದೆ. ಆದ್ದರಿಂದ ಹೊನ್ನಾಳಿ ಶಾಸಕರಿಗೆ ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ: ಶುಲ್ಕ ಪಾವತಿಸಿಲ್ಲವೆಂದು ತರಗತಿ ನಡೆಸದಿದ್ದರೆ ಕಾನೂನು ಕ್ರಮ: ಸುರೇಶ್‌ ಕುಮಾರ್‌

ಕೋವಿಡ್‌ ಕೇಂದ್ರದಲ್ಲಿ ನೆನ್ನೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಕೋವಿಡ್ ನಿಯಂತ್ರಣಕ್ಕಾಗಿ ಪ್ರಾರ್ಥಿಸಿ ಮೃತ್ಯುಂಜಯ ಮತ್ತು ಧನ್ವಂತರಿ ಹೋಮ ನಡೆಸಿದ್ದರು. ಇದೇ ವೇಳ ಸೋಂಕಿತರಿಗೆ ಹಬ್ಬದೂಟವನ್ನು ವ್ಯವಸ್ಥೆ ಮಾಡಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಹೊನ್ನಾಳಿ ತಹಸೀಲ್ದಾರ್ ಬಸನಗೌಡ ಕೋಟೂರು ಅವರು ರೇಣುಕಾಚಾರ್ಯ ವಿರುದ್ಧ  ಪ್ರಕರಣ ದಾಖಲಿಸುವುದಾಗಿ ಹೇಳಿದ್ದರು.

ಶಾಸಕ ರೇಣುಕಾಚಾರ್ಯ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ತಾವು ಲೋಕ ಕಲ್ಯಾಣಕ್ಕಾಗಿ ಹೋಮ ಮಾಡಿರುವೆ, ನನ್ನ ವಿರುದ್ಧ ಕೇಸ್ ದಾಖಲಿಸಲು ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದರು. ತಾಕತ್ತಿದ್ದರೆ ಕೇಸ್ ದಾಖಲಿಸಲಿ ಎಂದು ಸವಾಲು ಹಾಕಿದ್ದರು.

Donate Janashakthi Media

Leave a Reply

Your email address will not be published. Required fields are marked *