ಬೆಂಗಳೂರು: ಮೆಟ್ರೊ ಬಳಿ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಅವರನ್ನು ತಡೆದಿದ್ದಾರೆ. ಖಾಲಿ ಟ್ರಂಕ್‌ನೊಂದಿಗೆ ತೇಜಸ್ವಿ ಸೂರ್ಯ ಪ್ರತಿಭಟಿಸಲು ಮುಂದಾಗಿದ್ದರು.
ಖಜಾನೆ ಖಾಲಿಯಾಗಿ ದಿವಾಳಿಯಾಗಿದೆ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ, ಎಂದು ಆರೋಪಿಸಿ ನ್ಯಾಷನಲ್ ಕಾಲೇಜು ಮೆಟ್ರೊ ಬಳಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ : ಸಾಹಿತಿಗಳ ಸಮಾಧಿ ಸಂರಕ್ಷಣೆಗೆ ಆಗ್ರಹ: ಸ್ಮಾರಕ ರೂಪ ನೀಡಲು ಬಿ.ಟಿ. ಲಲಿತಾ ನಾಯಕ್ ಮನವಿ
ಪೊಲೀಸ್ ಅಧಿಕಾರಿಗಳು ಸೂರ್ಯ ಅವರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, “ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ನೀತಿ!! ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಖಾಲಿ ಟ್ರಂಕ್ ತೋರಿಸಿ ಪ್ರತಿಭಟನೆ ಮಾಡುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡನೀಯ. ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕದಲ್ಲಿ ಸಂಸದರಿಗೆ ಪ್ರತಿಭಟಿಸುವ ಹಕ್ಕು ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇಂದಿನಿಂದ ನಮ್ಮ ಮೆಟ್ರೊ ಪ್ರಯಾಣ ದರ ಶೇ 5 ರಷ್ಟು ಹೆಚ್ಚಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ತಾತ್ಕಾಲಿಕ ತಡೆ ನೀಡಲಾಗಿದೆ.
ಇದನ್ನೂ ನೋಡಿ : ಸಿದ್ದಿ, ಕುಣಬಿ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ವೈಶಿಷ್ಟ್ಯತೆಯ ನೃತ್ಯ Janashakthi Media
