ಬಾಗಲಕೋಟೆ: ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿಯೂ ಅನ್ಯಾಯವಾಗುತ್ತಿದೆ. ‘ಮಹದಾಯಿ, ಮೇಕೆದಾಟು ಯೋಜನೆಗಳು ಏನಾಗಿವೆ. ಈ ಬಗ್ಗೆ ಮಾತನಾಡುವ ಧೈರ್ಯವನ್ನು ರಾಜ್ಯದ ಸಂಸದರು, ರಾಜ್ಯದಿಂದ ಕೇಂದ್ರ ಸಚಿವರು ತೋರಿಸಲಿ’ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ. ಇದನ್ನು ಕೇಳುವ ಧೈರ್ಯ ಬಿಜೆಪಿ ನಾಯಕರಿಗೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಮಹಾರಾಷ್ಟ್ರ| ಮತದಾನವಿಲ್ಲದೆ ಚುನಾವಣೆಗಳು ನಡೆಯುವ ಏಕೈಕ ಪ್ರಜಾಪ್ರಭುತ್ವ – ನಟ ಕಿಶೋರ್
ಗ್ಯಾರಂಟಿಗಳ ಬಗ್ಗೆ ಉಡಾಫೆ ಮಾಡನಾಡುವ ಬಿಜೆಪಿ ನಾಯಕರು, ಅವುಗಳನ್ನು ನಿಲ್ಲಿಸಲಿ ಎಂಬ ಎದೆಗಾರಿಕೆ ತೋರಿಸಲಿ’ ಚುನಾವಣೆಯಲ್ಲಿ ಭರವ‘ಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ಕೇಂದ್ರ ವಿಫಲವಾಗಿದೆ. ರೈತರ ಆದಾಯ ದ್ವಿಗುಣವಾಗಿಲ್ಲ. ಸಿಲಿಂಡರ್, ಪೆಟ್ರೋಲ್ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದೆ. ‘ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಪಾವತಿಸಲಾಗುವುದು ಎಂದು ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅವರಿಗೆ ನಮ್ಮ ಸರ್ಕಾರ ಟೀಕಿಸುವ ನೈತಿಕತೆ ಇಲ್ಲ’ ಎಂದು ಟೀಕಿಸಿದರು.
20 ವರ್ಷಗಳ ಹಿಂದೆ ಮನರೇಗಾ ಜಾರಿ ಮಾಡಲಾಯಿತು. ಅದರಲ್ಲಿನ ಮಹಾತ್ಮ ಗಾಂಧಿ ಹೆಸರು ತೆಗೆಯುವ ಮೂಲಕ ಅವರ ತತ್ವಗಳ ವಿರುದ್ಧ ಸರ್ಕಾರ ನಡೆದುಕೊಳ್ಳುತ್ತಿದೆ. ನಾಥುರಾಮ್ ಗೋಡ್ಸೆ ಗಾಂಧೀಜಿ ಅವರನ್ನು ಕೊಂದರೆ, ಬಿಜೆಪಿ ಅವರ ಸಿದ್ಧಾಂತಗಳ ಕೊಲೆ ಮಾಡಿದೆ ಎಂದು ಆರೋಪಿಸಿದರು.
ಮನರೇಗಾ ಬಚಾವೋ ಸಂಗ್ರಾಮ ಹೆಸರಿನಲ್ಲಿ ಹೋರಾಟ ಮಾಡಲಾಗುತ್ತಿದೆ. ಜನ ಕೇಂದ್ರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಇದನ್ನೂ ನೋಡಿ : ಉತ್ತರ ಪ್ರದೇಶ | ಮತದಾರರ “ಪರಿಷ್ಕರಣೆಯೋ? ಹರಣವೋ? | ಗುರುರಾಜ ದೇಸಾಯಿ| Janashakthi Media #upsir
