ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಗೆ ಸಿದ್ಧತೆ

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಿದ್ದು, ಎಲ್ಲ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ.

ಲೋಕಾಯುಕ್ತ ಎಸ್ಪಿ ಉದೇಶ್‌ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್‌ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರಿನ ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.ಇದನ್ನು ಓದಿ :ಬೆಂಗಳೂರು| ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿತ್ತು.ಇದನ್ನು ಓದಿ :ತಮಿಳುನಾಡು| ಬಾಲಕಿ ಮೇಲೆ 7 ಮಂದಿ ಕಾಲೇಜು ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ

 

Donate Janashakthi Media

Leave a Reply

Your email address will not be published. Required fields are marked *