ಮುಡಾ ಪ್ರಕರಣ; ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯೆ

ಬೆಂಗಳೂರು:  ರಾಜ್ಯ ಸರಕಾರ ಮತ್ತು ರಾಜಭವನ ನಡುವಿನ ಸಂಘರ್ಷ ದೇಶದ ಗಮನ ಸೆಳೆದಿದ್ದು, ಈಗ   ರಾಷ್ಟ್ರಪತಿ ಅವರನ್ನು ಕರ್ನಾಟಕದ ಕಡೆ ನೋಡುವಂತೆ ಮಾಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದರ ವಿರುದ್ಧ ರಾಷ್ಟ್ರಪತಿ ಬಳಿಗೆ ಪರೇಡ್ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿರುವಾಗಲೇ ರಾಷ್ಟ್ರಪತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಯಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಷ್ಟ್ರಪತಿಗಳಿಗೆ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಚಾರಣೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ದೂರಿನ ವಿಷಯವಾಗಿ ಸೂಕ್ತ ರೀತಿಯಲ್ಲಿ ಗಮನ ಹರಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರಪತಿ ಅವರು ಸೂಚನೆ ನೀಡಿದ್ದಾರೆ. ಇದರೊಂದಿಗೆ ಈಗ ಕಾರ್ಯದರ್ಶಿ ಅವರು ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಬಗ್ಗೆ ಗಮನ ಹರಿಸಿ ಕೈಗೊಂಡ ಕ್ರಮದ ಬಗ್ಗೆ ಸೂಕ್ತ ಮಾಹಿತಿಯನ್ನು ದೂರುದಾರರಿಗೆ ನೀಡಬೇಕಾಗಿದೆ.ಆದರೆ ಈ ವಿಚಾರದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಕಾನೂನು ವ್ಯಾಪ್ತಿಯಲ್ಲಿ ಏನು ಮಾಡಲು ಸಾಧ್ಯವಿದೆ. ರಾಜ್ಯಪಾಲರ ನಿರ್ಧಾರ ಬಗ್ಗೆ ಅವರು ಹೇಗೆ ಗಮನ ಹರಿಸಬೇಕಾಗುತ್ತದೆ ಎನ್ನುವ ಬಗ್ಗೆ ಗೊಂದಲವಿದೆ ಎಂದು ಹೇಳಿದ್ದಾರೆ. ಮುಡಾ 

ಇದನ್ನು ಓದಿ : ಕೆಎಎಸ್ ಪರೀಕ್ಷೆಯಲ್ಲಿ ಕನ್ನಡಕ್ಕೆ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ ಮರುಪರೀಕ್ಷೆಗೆ ಕರವೇ ಆಗ್ರಹ

ಹಾಗೆಯೇ ಇದಕ್ಕೆ ಮುಖ್ಯಕಾರ್ಯದರ್ಶಿ ಅವರು ಹೇಗೆ ಪ್ರತಿಕ್ರಿಯಿಸಿದ್ದು, ಇದರ ಬಗ್ಗೆ ರಾಷ್ಟ್ರಪತಿ ಅವರಿಗೆ ಹೇಗೆ ವಾಪಸ್ ಮಾಹಿತಿ ನೀಡುತ್ತಾರೆ ಎನ್ನುವುದು ಕುತೂಹಲ ಕೆರಳಿಸಿದೆ ಎಂದಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮದ ಬಗ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಗ 19ರಂದು ಬೆಳಗ್ಗೆ 11 ಗಂಟೆಗೆ ಇ ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ರಾಜ್ಯಪಾಲರು ಬಿಜೆಪಿ ಮತ್ತು ಜೆಡಿಎಸ್ ಒತ್ತಡಕ್ಕೆ ಮಣಿದು ಕಾನೂನುಬಾಹಿರವಾಗಿ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಸ್ಪಷ್ಟ ಜನಾದೇಶದೊಂದಿಗೆ ಅಸ್ಥಿತ್ವಕ್ಕೆ ಬಂದ ಸರಕಾರವನ್ನು ಅಸ್ಥಿರಗೊಳಿಸಿ ಸಂವಿಧಾನಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು. ಈ ವಿಚಾರವಾಗಿ ರಾಷ್ಟ್ರಪತಿ ಅವರು ಮಧ್ಯಪ್ರವೇಶ ಮಾಡಿ ರಾಜ್ಯಪಾಲರು ನೀಡಿರುವ ವಿಚಾರಣಾ ಅನುಮತಿಯನ್ನು ವಾಪಸ್ ಪಡೆಯುವಂತೆ ಮಾಡಬೇಕು ಎಂದೂ ವಿನಂತಿಸಿದ್ದರು.

ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಕೋರಿದ ಅರ್ಜಿಗೆ ರಾಷ್ಟ್ರಪತಿ ಪ್ರತಿಕ್ರಿಯಿಸಿ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಅವರು ಏನು ಮಾಡುತ್ತಾರೋ ನೋಡೋಣ. ನಂತರ ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ. ಮುಡಾ 

ಇದನ್ನು ನೋಡಿ : ಏನಿದು ಹೇಮಾ ಸಮಿತಿ ಶಿಫಾರಸ್ಸು? ಈ ಹಿಂದೆ ಬಂದ ಶಿಫಾರಸ್ಸುಗಳು ಏನಾದವು?? Janashakthi Media

Donate Janashakthi Media

Leave a Reply

Your email address will not be published. Required fields are marked *