ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ,ರಾಜ್ಯಪಾಲರು ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.
ಇದನ್ನೂ ಓದಿ : ಸುಸ್ಥಿತಿ’ಯಲ್ಲಿ ಕರ್ನಾಟಕದ ಆರ್ಥಿಕತೆ: ದುಸ್ಥಿತಿಯಲ್ಲಿ ಜನರ ಬದುಕು
ವಿಚಾರಣೆ ನಡೆಸುವ ಲೋಕಾಯುಕ್ತ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐ ನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಲೋಕಾಯುಕ್ತ ವಿಚಾರಣೆ ಪೂರ್ವನಿಯೋಜಿತವಾಗಿ, ನಿಷ್ಪಕ್ಷವಾಗುತ್ತದೆ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಿಬಿಐ ಯಂತೆ , ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.