ಮೈಸೂರು: ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ.
ಇಬ್ಬರಿಗೂ ಜಾರಿಯಾಗಿದ್ದ ಸಮನ್ಸ್ ಪ್ರಶ್ನಿಸಿ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ನಾಗಪ್ರಸನ್ನ ಪೀಠ, ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿದೆ. ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ
ಎಲ್ಲರ ಮಾಹಿತಿಯನ್ನು, ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳ್ತಾ ಇದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ. ಹೀಗಾಗಿ ಕೋರ್ಟ್ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು. ಇನ್ನು ಇತ್ತ ಸಿಎಂ ಪತ್ನಿ ಪಾರ್ವತಿ ಪರ ವಾದ ಮಂಡಿಸಿದ ಸಂದೇಶ್ ಚೌಟ, ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ. ಮನಿಲಾಂಡ್ರಿಂಗ್ ಪ್ರಶ್ನೆಯೇ ಬರೋದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು
ಇನ್ನೂ ಇಡಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿದ ಕೋರ್ಟ್ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ