ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಕೆಜೆ ಅಬ್ರಾಹಂ ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಸಚಿವ ಸಂಪುಟ ನಿರ್ಣಯವನ್ನು ತಿರಸ್ಕರಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ಕೆಜೆ ಅಬ್ರಾಹಂ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ ವಿರುದ್ಧ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಮನವಿ ಮಾಡಿತ್ತು.
ಇದನ್ನೂ ಓದಿ : ಕೇಂದ್ರ ಸಚಿವ ವಿ. ಸೋಮಣ್ಣಗೆ ನೀಡಿದ್ದ ಸಂಸದರ ಕಚೇರಿ ವಾಪಸ್ ಪಡೆದ ರಾಜ್ಯ ಸರ್ಕಾರ!
ಇದೆಲ್ಲದರ ನಡುವೆಯೂ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದ್ದು, ಸಿದ್ದರಾಮಯ್ಯ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಸಿಎಂ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಆರಂಭವಾಗಲಿದೆ. ಸಿಎಂ ತನಿಖೆ ಅಥವಾ ಕೋರ್ಟ್ ವಿಚಾರಣೆ ಎದುರಿಸಬೇಕಾಗುವುದು. ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ನೀಡಿರುವ ಈ ಖಾಸಗಿ ದೂರಿಗೆ ರಾಜ್ಯಪಾಲರ ಪೂರ್ವಾನುಮತಿಯ ಬಲ ಸಿಗಲಿದೆ.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಅನುಮತಿಯ ವಿಚಾರವೂ ಪ್ರಸ್ತಾಪವಾಗಿತ್ತು. ಅನುಮತಿ ನೀಡಿರುವುದರಿಂದ ಕೋರ್ಟ್ ಆದೇಶ ಮಹತ್ವ ಪಡೆಯಲಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ 3 ಸಾಧ್ಯತೆಗಳಿವೆ. ಮೊದಲನೆಯದು ಮೇಲ್ನೋಟಕ್ಕೆ ಆರೋಪ ಕಂಡುಬಂದರೆ ತನಿಖೆಗೆ ಆದೇಶಿಸಬಹುದು. ಎರಡನೆಯದು ತಾವೇ ಪರಿಜ್ಞಾನಕ್ಕೆ ಪಡೆದು ಸಿಎಂಗೆ ಸಮನ್ಸ್ ಜಾರಿಗೊಳಿಸಬಹುದು. ಹಾಗೂ ಮೂರನೆಯದು ಮೇಲ್ನೋಟಕ್ಕೆ ದೂರಿನಲ್ಲಿ ಸತ್ಯಾಂಶವಿಲ್ಲ ಎನ್ನಿಸಿದರೆ ಖಾಸಗಿ ದೂರು ವಜಾಗೊಳಿಸಬಹುದು.