ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ .
ಈ ಪ್ರಕರಣದಲ್ಲಿ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಮೈಸೂರಿನ ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಬಳಸಿಕೊಂಡು, ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4ನೇ ಹಂತಗಳಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು .
ಇದನ್ನೂ ಓದಿ:ಇಂದೋರ್ : ದಲಿತ ವರನಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕಾರ
ಲೋಕಾಯುಕ್ತ ಪೊಲೀಸರು ಈ ಪ್ರಕರಣದಲ್ಲಿ ತನಿಖೆ ನಡೆಸಿ, ಸಿದ್ದರಾಮಯ್ಯ ಮತ್ತು ಅವರ ಪತ್ನಿಗೆ ಕ್ಲೀನ್ ಚಿಟ್ ನೀಡಿದ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ರಿಪೋರ್ಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿ ಸಲ್ಲಿಸಿದ್ದರು .
ಈ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರೆಸಲು ಸೂಚಿಸಿ, ಸಂಪೂರ್ಣ ವರದಿ ಸಲ್ಲಿಸಿದ ನಂತರ ಮುಂದಿನ ಆದೇಶ ನೀಡುವುದಾಗಿ ತಿಳಿಸಿದ್ದಾರೆ .
ಇದನ್ನೂ ಓದಿ:“ಮುಸ್ಲಿಂ ಹುಡುಗರು ಪಂಚರ್ ಹಾಕ್ತಾರೆ” ನರೇಂದ್ರ ಮೋದಿಯ ಹೇಳಿಕೆಗೆ ವಿರೋಧ
ಇದೇ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆ ಮತ್ತಷ್ಟು ಮಹತ್ವ ಪಡೆಯಲಿದೆ .