ಮುಜುಗರಕ್ಕೆ ಒಳಗಾದ ಭಜರಂಗದಳ; ದೇವಸ್ಥಾನದಿಂದಲೇ ಬ್ಯಾನರ್‌ ತೆರವು

ಮಂಗಳೂರು: ಕರಾವಳಿ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಜಾತ್ರೆ, ಧಾರ್ಮಿಕ ಸಮಾರಂಭಗಳಲ್ಲಿ ಸಂಘಪರಿವಾರದ ಸಂಘಟನೆಗಳು ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗುತ್ತಿದೆ. ಇದೀಗ ಬ್ಯಾನರ್ ವಿಚಾರವಾಗಿ ಭಜರಂಗದಳ ನಾಯಕರು ಮುಜುಗರಕ್ಕೆ ಒಳಗಾಗಿದ್ದಾರೆ. ದೇವಸ್ಥಾನ ಮಂಡಳಿಯೇ ಬ್ಯಾನರ್‌ ತೆರವುಗೊಳಿಸಿದ ಘಟನೆ ನಡೆದಿದೆ.

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಹಾಗೂ ಶಿವಶಕ್ತ ಶಾಖೆ ಹೆಸರಿನಲ್ಲಿ ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ಕುಕ್ಕರ್ ಬಾಂಬ್ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ವ್ಯಾಪಾರ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಆಗಿರುವುದು ಗಮನಕ್ಕೆ ಬರುತ್ತಿದ್ದಂತೆ ಕ್ಷೇತ್ರದ ಆಡಳಿತ ಮಂಡಳಿ ಕದ್ರಿ ಪೊಲೀಸರಿಗೆ ಸೂಚನೆ ನೀಡಿ ಆಡಳಿತ ಮಂಡಳಿ ಬ್ಯಾನರ್ ತೆರವುಗೊಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *