ಮುಂಬಯಿ: ಆಚರಣೆ-ಸಮಾರಂಭಗಳಿಗೆ ನಿಷೇಧಾಜ್ಞೆ; ಜನವರಿ 2ರವರೆಗೂ ಕರ್ಫ್ಯೂ ಜಾರಿ

ಮುಂಬೈ: ಕ್ರಿಸ್‌ ಮಸ್‌ ಹಾಗೂ ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ, ಮುಂಬಯಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 2023ರ ಜನವರಿ 02ರವರೆಗೂ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಐದಕ್ಕಿಂತ ಹೆಚ್ಚಿನ ಜನರ ಓಡಾಡುವಂತಿಲ್ಲ ಎಂದು ಆದೇಶ ನೀಡಲಾಗಿದೆ.

ಭಯೋತ್ಪಾದಕ ಚಟುವಟಿಕೆಗಳು ತಡೆ ಹಿಡಿಯುವ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಭಂಗವುಂಟುಮಾಡುವ ವರದಿಗಳ ನಂತರ ಮುನ್ನೆಚ್ಚರಿಕೆ ಕ್ರಮವಾಗಿ, ಮುಂಬೈ ಪೊಲೀಸರು ನಗರದಲ್ಲಿ ಕರ್ಫ್ಯೂ ಆದೇಶಗಳನ್ನು ಜಾರಿಗೊಳಿಸಿರುವುದಾಗಿ ಘೋಷಿಸಿದ್ದಾರೆ.

ಕರ್ಫ್ಯೂ ಜಾರಿಯ ಕುರಿತು ಮುಂಬೈ ಪೊಲೀಸ್ ಕೇಂದ್ರ ಕಚೇರಿಯಿಂದ ಆದೇಶ ಪ್ರಕಟಗೊಂಡಿದ್ದು, ಮುಂಬೈ ಪೊಲೀಸ್‌ ಉಪ ವಿಭಾಗದ ಆಯುಕ್ತ ವಿಶಾಲ್ ಠಾಕೂರ್ ನಿಷೇಧಾಜ್ಞೆ ಜಾರಿಯ ಕುರಿತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಡಿಸೆಂಬರ್‌ 04ರಿಂದ ಜನವರಿ 2ರ ವರೆಗೂ ಶಸ್ತ್ರಾಸ್ತ್ರಗಳು, ಬಂದೂಕುಗಳು, ಕತ್ತಿಗಳು ಮತ್ತು ಇತರ ಆಯುಧಗಳನ್ನು ಹೊತ್ತುಕೊಂಡು ಸಾರ್ವಜನಿಕವಾಗಿ ಸಂಚಾರಿಸಕೂಡದೆಂದು ನಿಷೇಧ ವಿಧಿಸಲಾಗಿದೆ.

ಪೊಲೀಸ್‌ ಇಲಾಖೆಯ ಸೂಚನೆಯಂತೆ, ಮದುವೆ ಸಮಾರಂಭಗಳು, ಅಂತ್ಯಕ್ರಿಯೆ ಸಭೆಗಳು, ಸ್ಮಶಾನಗಳಿಗೆ ಹೋಗುವ ದಾರಿಯಲ್ಲಿ ಧ್ವನಿವರ್ಧಕಗಳು, ವಾದ್ಯಗಳನ್ನು ನುಡಿಸುವಂತಿಲ್ಲ, ಪಟಾಕಿ ಹೊಡೆಯುವಂತಿಲ್ಲ. ಕ್ಲಬ್‌ಗಳು, ಸಹಕಾರ ಸಂಘಗಳು ಮತ್ತು ಇತರ ಸಂಘಗಳ ಮೆರವಣಿಗೆಗಳ ಮೇಲೆ ನಿಷೇಧ ವಿಧಿಸಲಾಗಿದೆ.

ಸಾರ್ವಜನಿಕ ಚಲನಚಿತ್ರ ಪ್ರದರ್ಶನ ಸ್ಥಳಗಳು ಅಥವಾ ಸುತ್ತಮುತ್ತಲಿನ ಯಾವುದೇ ಸ್ಥಳಗಳಲ್ಲಿ, ನಾಟಕಗಳು ಅಥವಾ ಕಾರ್ಯಕ್ರಮಗಳ ಆಯೋಜನೆ ಮತ್ತು ಸಭೆಗಳಿಗೆ ನಿಷೇಧವನ್ನು ಹೇರಲಾಗಿದೆ. ಸರ್ಕಾರಿ ಕಚೇರಿಗಳ ಸುತ್ತಲೂ ಸರ್ಕಾರಿ ಅಥವಾ ಅರೆ ಸರ್ಕಾರಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ಅನಗತ್ಯ ಜನ ಸೇರುವಂತಿಲ್ಲ. ಶಾಲಾ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳು, ಕಾರ್ಖಾನೆಗಳಲ್ಲೂ ಸಾಮಾನ್ಯ ವ್ಯವಹಾರಗಳ ಸಭೆಗಳನ್ನು ನಿಷೇಧಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *