ಜುಲೈ 7ರಂದು ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ

ತುಮಕೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಜುಲೈ 7ರಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್‌ನಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನೌಕರರು ಸಜ್ಜಾಗಿದ್ದಾರೆ. ಜುಲೈ

ಇದನ್ನೂ ಓದಿ: ರೈತರ ಓಟು ನಮಗೆ ಬೇಕಾಗಿಲ್ಲ ಎಂದು ಹೇಳುವ ಧೈರ್ಯ ಸಿದ್ದರಾಮಯ್ಯ ಸರ್ಕಾರಕ್ಕೆ ಇದೆಯಾ? ಎಸ್‌ಕೆಎಂ ನಾಯಕರ ಪ್ರಶ್ನೆ

ಈ ಬಗ್ಗೆ ಮಹಾನಗರ ಪಾಲಿಕೆ ಸಂಘದ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಸಾವಿರಕ್ಕೂ ಅಧಿಕ ಪಾಲಿಕೆ ನೌಕರರು ಸಾಮೂಹಿಕ ರಜೆ ಹಾಕಿ ಮುಷ್ಕರಕ್ಕೆ ಬರಬೇಕು ಎಂದಿದ್ದಾರೆ.

ಮಹಾನರ ಪಾಲಿಕೆ ನೌಕರರ ಬೇಡಿಕೆಗಳೇನು?

ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ವೇತನ ತಾರತಮ್ಯ ನಿವಾರಣೆ, ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ, ಆರೋಗ್ಯ ಸೌಲಭ್ಯಗಳು ಮತ್ತು ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸಬೇಕು.

ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು ಎಂದು ಮಹಾನಗರ ಪಾಲಿಕೆ ನೌಕರರು ಆಗ್ರಹಿಸಿದ್ದಾರೆ.

ಇದನ್ನೂ ನೋಡಿ: LIVE | ಬಲವಂತದ ಭೂ ಸ್ವಾಧೀನ ವಿರೋಧಿಸಿ ಭೂಮಿ ಸತ್ಯಾಗ್ರಹ |7ನೇ ದಿನ @ ಫ್ರೀಡಂ ಪಾರ್ಕ್‌

Donate Janashakthi Media

Leave a Reply

Your email address will not be published. Required fields are marked *