ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌–ಉಪಮೇಯರ್‌ ಚುನಾವಣೆಯಲ್ಲಿ  ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು

Please follow and like us:
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌–ಉಪಮೇಯರ್‌ ಚುನಾವಣೆಯಲ್ಲಿ  ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ವರ್ಷಾ ಜಾನೆ ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಗುರುವಾರ ಆಯ್ಕೆಯಾದರು. ಕಾಂಗ್ರೆಸ್‌ನ ತೃಪ್ತಿ ಲಾಖೆ ಅವರಿಗೆ ಉಪ ಮೇಯರ್‌ ಸ್ಥಾನ ಒಲಿಯಿತು.

ಚುನಾವಣಾ ಅಧಿಕಾರಿ, ಕಲಬುರಗಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್‌ ನೇತೃತ್ವದಲ್ಲಿ ಮೇಯರ್‌–ಉಪಮೇಯರ್‌ ಆಯ್ಕೆ ಪ್ರಕ್ರಿಯೆ ನಡೆಯಿತು. ನಗರದ ಇಂದಿರಾ ಗಾಂಧಿ ಸ್ಮಾರಕ ಭವನದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು.

ಇದನ್ನೂ ಓದಿ : ಮಹಾದೇವಪುರದಲ್ಲಿ 1 ಲಕ್ಷ ಅಕ್ರಮ ಮತ, ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್‌ ಗಾಂಧಿ

ವರ್ಷಾ ಜಾನೆ ಹಾಗೂ ಬಿಜೆಪಿಯ ಗಂಗಮ್ಮ ಮನ್ನೊಳಿ ಸ್ಪರ್ಧಾ ಕಣದಲ್ಲಿದ್ದರು. ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದ ಮೇಯರ್‌ ಸ್ಥಾನಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದವು.

ಚುನಾವಣೆಯಲ್ಲಿ ಜೆಡಿಎಸ್‌ನ ನಾಲ್ವರು ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರಿಂದ 36 ಮತಗಳೊಂದಿಗೆ ವರ್ಷಾ ಜಾನೆ ವಿಜೇತರಾಗಿ ಹೊರಹೊಮ್ಮಿದರು.

ಜೆಡಿಎಸ್‌ ಜೊತೆಗಿನ ಮೈತ್ರಿ ನೆಚ್ಚಿಕೊಂಡಿದ್ದ ಬಿಜೆಪಿ ಅಭ್ಯರ್ಥಿ ಗಂಗಮ್ಮ ಬರೀ 27 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಯಿತು.

ಉಪಮೇಯರ್ ಸ್ಥಾನಕ್ಕೆ ಮೂರು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್‌ನಿಂದ ತೃಪ್ತಿ ಲಾಖೆ, ಜೆಡಿಎಸ್‌ನಿಂದ ವಿಜಯಲಕ್ಷ್ಮಿ ರೆಡ್ಡಿ ಹಾಗೂ ಬಿಜೆಪಿಯಿಂದ ಪಾರ್ವತಿ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಯಲ್ಲಿ ತೃಪ್ತಿ ಲಾಖೆ 33 ಮತಗಳನ್ನು ಪಡೆದು ವಿಜಯ ಸಾಧಿಸಿದರು.

ಇದನ್ನೂ ನೋಡಿ : ಉತ್ತರಾಖಂಡದಲ್ಲಿ ಮೇಘಸ್ಫೋಟ : ಕೊಚ್ಚಿಹೋದ ಮನೆಗಳು Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *