ಬೆಂಗಳೂರು :ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದುಇಂದು ನ್ಯಾಯಾಂಗ ವಶಕ್ಕೆ ಒಪ್ಪಿಸಲು ನ್ಯಾಯಾಲಯ ಆದೇಶ ನೀಡಿದೆ.
14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಇಂದು ನ್ಯಾಯಾಲಯ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಕಾರಾಗೃಹದ ಪಾಲಾಗಿದ್ದಾರೆ.
ಇದನ್ನು ಓದಿ : ಮುನಿರತ್ನ ಪ್ರಕರಣ : ಶಾಸನ ಸಭಾ ಸದಸ್ಯತ್ವ ಅಮಾನತುಗೊಳಿಸಿ – ಸಿಪಿಐಎಂ ಒತ್ತಾಯ
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಕಾರಾಗೃಹದ ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.
ಮುನಿರತ್ನ ಅವರನ್ನು ಪೊಲೀಸರು ನ್ಯಾಯಾಲಯಲಕ್ಕೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಇದನ್ನು ನೋಡಿ : ಮುನಿರತ್ನ ಭ್ರಷ್ಟಾಚಾರಿ, ಮನೆಯಲ್ಲಿಯೇ ಬಿಬಿಎಂಪಿ ಬಿಲ್ ಬರೆಯುತ್ತಾರೆ – ಸಚಿವ ಕೃಷ್ಣ ಬೈರೇಗೌಡ ಆರೋಪ