ಬೆಂಗಳೂರು: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ ರೆಡ್ಡಿ ರನ್ನು ಬಂಧಿಸಿದ್ದಾರೆ. ಮುನಿರತ್ನ
ಅಧಿಕಾರಿಗಳು, ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಅದೆ ರಾಧಿಕ ಸಂಚಿನಲ್ಲಿ ಪಾತ್ರ ವಹಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಒಳಮೀಸಲಾತಿಗಾಗಿ ಏಕ ಸದಸ್ಯ ಆಯೋಗ ನೇಮಕ – ಸಿಪಿಐಎಂ ಸ್ವಾಗತ
ಬೆಂಗಳೂರು ಮೂಲದ ರಾಜ್ಯದ ಬಿಜೆಪಿ ಪ್ರಭಾವಿ ಮುಖಂಡ ಹಾಗೂ ಹಿರಿಯ ಶಾಸಕನಿಗೆ ಏಡ್ಸ್ ಸೋಂಕು ಹಬ್ಬಿಸಲು ಚುಚ್ಚು ಮದ್ದು ನೀಡುವ ಸಂಚನ್ನು ಆರೋಪಿಗಳು ರೂಪಿಸಿದ್ದರು.
ಈ ಸಂಚಿನಲ್ಲಿ ಇನ್‌ಸ್ಪೆಕ್ಟರ್ ಅರಣ್ಯ ಪ್ರಮುಖ ಪಾತ್ರವಹಿಸಿದ ಸಂಗತಿ ಗೊತ್ತಾಯಿತು. ಹಾಗೆಯೇ ವಿಚಾರಣೆ ವೇಳೆ ದೂರುದಾರರು ಹಾಗೂ ಕೆಲ ಸಾಕ್ಷಿದಾರರು ಕೂಡ ಅಯ್ಯಣ ಕುರಿತು ಮಾಹಿತಿ ನೀಡಿದ್ದರು. ಅಂತೆಯೇ ಐಪಿಸಿ 120ಬಿ (ಅಪರಾಧಿ ಸಂಚು) ಆರೋಪದಡಿ ಅಯ್ಯಣರವನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ನೋಡಿ: ಪ್ರತ್ಯೇಕ ‘ಆದಿವಾಸಿ ನಿಗಮ’ ಸ್ಥಾಪನೆಗೆ ಶೀಘ್ರವೇ ಕ್ರಮ : ಸಿಎಂ ಸಿದ್ದರಾಮಯ್ಯ Janashakthi Media