ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇಂದು ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುನಿರತ್ನ ಪರ ಹಿರಿಯ ವಕೀಲರಾದ ಚಂದ್ರಶೇಖರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೊರ್ಟ್ ನಾಳೆಗೆ ಮುಂದೂಡಿ ಆದೇಶ ನೀಡಿದೆ.
ಇದನ್ನು ಓದಿ : ತುಮಕೂರು: ಬಿಜೆಪಿ ಹಿರಿಯ ಮುಖಂಡ ಕಾರ್ಯಕರ್ತನಿಗೆ ಕಪಾಳಮೋಕ್ಷ
ಮುನಿರತ್ನ ವಿರುದ್ಧ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಜೀವ ಬೆದರಿಕೆ, ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದಕ್ಕೆ ಮುನಿರತ್ನರನ್ನು ಕೆಲ ದಿನಗಳ ಹಿಂದೆ ಕೋಲಾರದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು.
ಕೋರ್ಟ್ಗೆ ಹಾಜರು ಪಡಿಸಿದ್ದಾಗ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿವೆ ಎಂದು ಜಡ್ಜ್ ಎದುರು ಮುನಿರತ್ನ ಹೇಳಿಕೆ ಕೊಟ್ಟಿದ್ದರು. ಹೀಗಾಗಿ ನಿನ್ನೆ ಬೌರಿಂಗ್ ಆಸ್ಪತ್ರೆಯಲ್ಲಿ ಮುನಿರತ್ನಗೆ ಪೊಲೀಸರು ಮೆಡಿಕಲ್ ಚೆಕಪ್ ಮಾಡಿಸಿದ್ದಾಗ ಮುನಿರತ್ನಗೆ ಅನಾರೋಗ್ಯವೆಂದು ವೈದ್ಯರು ವರದಿ ನೀಡಿದ್ದರು.
ಇದನ್ನು ನೋಡಿ : ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿ ಮಾಡಿ – ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ