ಕೊಪ್ಪಳ | ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ತೀರ್ಪು  ಪ್ರಕಟ ಎಲ್ಲಾ ಆರೋಪಗಳು ಖುಲಾಸೆ

ಕೊಪ್ಪಳ : ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ನೀಡಲಾಗಿದೆ. ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ  ಅಂತಿಮ ತೀರ್ಪು  ಪ್ರಕಟವಾಗಿದೆ.  ಕೊಪ್ಪಳ
ಇದೀಗ ಯಲ್ಲಾಲಿಂಗ ಪ್ರಕರಣದ ತೀರ್ಪು ಕೊನೆಗೂ ಪ್ರಕಟವಾಗಿದೆ. ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ್ ಅವರು ತೀರ್ಪು ಪ್ರಕಟಿಸಿದ್ದಾರೆ. ಸಾಕ್ಷಿಗಳ ಕೊರತೆ ಕಾರಣಕ್ಕೆ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿದ್ದಾರೆ. ಹತ್ತು ವರ್ಷದ ನಂತರ ಪ್ರಕಟವಾದ ಕೊಪ್ಪಳದ ಕನಕಾಪೂರದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಕೇಸ್ ದೇಶದಲ್ಲಿ ಸದ್ದು ಮಾಡಿತ್ತು.

ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮೂರಿನಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ. ಈ ಬೆಳವಣಿಗೆ ಬೆನ್ನಲ್ಲೇ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಕೊಲೆ ನಡೆದಿತ್ತು.

ಅಂದಿನ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿ 9 ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಕೈ ಬಿಡುವಂತೆ ಆಗಿತ್ತು. ಆದರೆ, ಇದೀಗ ಪ್ರಕರಣದ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಕನಕಾಪೂರ ನಿವಾಸಿ. ತಮ್ಮ ಗ್ರಾಮದ ಸಮಸ್ಯೆಯನ್ನು ಖಾಸಗಿ ವಾಹಿನಿ ಮುಂದೆ ಹೇಳಿದ್ದಕ್ಕೆ ಯಲ್ಲಾಲಿಂಗನ ಹತ್ಯೆ ಮಾಡಲಾಗಿತ್ತು. ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ ಮತ್ತು ಅವರ ಮಗ ಮಹಾಂತೇಶ ನಾಯಕ ಸೇರಿ 9 ಜನರ ಮೇಲೆ ಕೊಲೆ ಆರೋಪ ಕೇಳಿಬಂದಿತ್ತು. ಕೊಪ್ಪಳ ರೈಲು ನಿಲ್ದಾಣದಲ್ಲಿ ಯಲ್ಲಾಲಿಂಗನ ಪ್ರಾಣ ಹೋಗಿತ್ತು. ಆ ಸಮಯದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಶಿವರಾಜ್ ತಂಗಡಗಿ. ಜಿಲ್ಲೆಯಲ್ಲಿ ಹಲವು ಪ್ರತಿಭಟನೆಗಳಿಗೂ ಈ ಕೊಲೆ ಪ್ರಕರಣ ಕಾರಣವಾಗಿತ್ತು.

ಕೊನೆಗೆ ಸಿದ್ದರಾಮಯ್ಯ ಸರ್ಕಾರ ಯಲ್ಲಾಲಿಂಗ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ಒಪ್ಪಿಸಿತ್ತು. ಶಿವರಾಜ ತಂಗಡಗಿ ರಾಜೀನಾಮೆ ಕೊಡಬೇಕಾಯ್ತು. ಹನುಮೇಶ್ ನಾಯಕ ಸೇರಿ 9 ಜನ ಈ ಪ್ರಕರಣದಲ್ಲಿ ಜೈಲು ಸೇರಿದ್ದರು. ಆದರೆ ಅನಾರೋಗ್ಯದ ನೆಪದಲ್ಲಿ ಹನುಮೇಶ ನಾಯಕ ಜೈಲಿಗಿಂತ ಹೆಚ್ಚಾಗಿ ಆಸ್ಪತ್ರೆಯಲ್ಲಿಯೇ ಕಾಲ ಕಳೆದದ್ದ.

ಈ ತೀರ್ಪು ಬಲಾಢ್ಯರ ತಾಳಕ್ಕೆ ಕುಣಿದ ತೀರ್ಪಾಗಿದೆ ಎಂದು ಆರೋಪಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *