ಚಂಡೀಗಢ ಮೇಯರ್ ಚುನಾವಣೆ : ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ’ ಸುಪ್ರೀಂ ಕೋರ್ಟ್‌ ಆಕ್ರೋಶ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ. ಚಂಡೀಗಢ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂತ್ರಿ ಡಿ ವೈ ಚಂದ್ರಚೂಡ್‌ ರವರು ವಿಚಾರಣೆ ನಡೆಸಿದ್ದಾರೆ. ಚಂಡೀಘಡ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮನೋಜ್ ಸೋಂಕರ್ ವಿರುದ್ಧ ಸೋತಿದ್ದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡುವಾಗ ಈ ರೀತಿ ಹೇಳಿದೆ.

ಇದನ್ನೂ ಓದಿಚಂಡೀಗಢ | ಬಹುಮತವಿದ್ದರೂ ಕೈ ತಪ್ಪಿದ ಮೇಯರ್‌ ಸ್ಥಾನ – ಕೋರ್ಟ್ ಕದ ತಟ್ಟಿದ ಕಾಂಗ್ರೆಸ್ & ಎಎಪಿ

ಅಲ್ಲದೆ ಫೆಬ್ರವರಿ 7 ರಂದು ನಿಗದಿಯಾಗಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂದಿನ ವಿಚಾರಣೆ ವೇಳೆ ಚುನಾವಣಾಧಿಕಾರಿ ಅನಿಲ್‌ ಮಸಿಹ್‌ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆಯಲ್ಲದೆ ಅವರು ಮತ ಪತ್ರಗಳಲ್ಲಿ ಗೀಚಿದ್ದಾರೆಂದು ತಿಳಿಯುತ್ತದೆ ಎಂದು ಹೇಳಿದೆ. “ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರೇಕೆ ಕ್ಯಾಮೆರಾ ನೋಡುತ್ತಿದ್ದರು? ಸಾಲಿಸಿಟರ್‌ ಅವರೇ ಇದು ಪ್ರಜಾಪ್ರಭುತ್ವದ ಅಪಹಾಸ್ಯ, ಕಗ್ಗೊಲೆ,” ಎಂದು ಸಿಜೆಐ ಹೇಳಿದರು.

ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲಾ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಎಂಟು ಮತಗಳನ್ನು ಚುನಾವಣಾಧಿಕಾರಿ ಅಮಾನ್ಯಗೊಳಿಸಿದ ನಂತರ ಬಿಜೆಪಿಗೆ 16 ಮತಗಳು ಹಾಗೂ ಆಪ್‌, ಕಾಂಗ್ರೆಸ್‌ ಮೈತ್ರಿಕೂಟಕ್ಕೆ 12 ಮತಗಳು ದೊರೆತು ಬಿಜೆಪಿಯ ಮನೋಜ್‌ ಸೋಂಕರ್‌ ಅವರನ್ನು ಮೇಯರ್‌ ಆಗಿ ಆಯ್ಕೆಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಚಂಡೀಗಢ

ವೀಡಿಯೊ ನೋಡಿಸೌಹಾರ್ದತೆಗಾಗಿ ಮಾನವ ಸರಪಳಿ : ರಾಜ್ಯವ್ಯಾಪಿ ಕೈ ಕೈ ಬೆಸೆದ ಶಾಂತಿಪ್ರಿಯ ಮನಸ್ಸುಗಳು Janashakthi Media

 

Donate Janashakthi Media

Leave a Reply

Your email address will not be published. Required fields are marked *