ಮೂರು ಲೋಕಸಭೆ-29 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ

ನವದೆಹಲಿ: 13 ರಾಜ್ಯಗಳ 29 ವಿಧಾನಸಭಾ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಸೇರಿ ಒಟ್ಟು ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟಗೊಂಡಿದೆ.  ಅಕ್ಟೋಬರ್‌ 30ರಂದು ಈ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

ಅಸ್ಸಾಂನಲ್ಲಿ ಐದು, ಪಶ್ಚಿಮ ಬಂಗಾಳದ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಮೂರು, ಬಿಹಾರ, ಕರ್ನಾಟಕದಲ್ಲಿ ತಲಾ ಎರಡು ಸ್ಥಾನಗಳಿಗೆ ಚುನಾವಣೆ ನಡೆದಿದ್ದವು. ರಾಜಸ್ಥಾನ ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆದಿದ್ದವು. ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾ ಮೂರೂ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು ನಡೆದಿದೆ.

ದಾದ್ರ ಮತ್ತು ನಗರ ಹವೇಲಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಿವಸೇನೆ ಅಭ್ಯರ್ಥಿ ಗೆಲುವು ದಾಖಲಿಸಿದೆ. ಮಧ್ಯಪ್ರದೇಶದ ಲೋಕಸಭೆ ಕ್ಷೇತ್ರ ಖಾಂಡ್ವಾದಲ್ಲಿ ಬಿಜೆಪಿ ಗೆದ್ದಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕರ್ನಾಟಕದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಗೆಲುವು ಸಾಧಿಸಿದೆ.

ಅಸ್ಸಾಂನ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷ ಗೆಲುವು ಸಾಧಿಸಿದೆ. ಭಬಾನಿಪುರ, ಮರಿಯಾನಿ ಮತ್ತು ಥೌರಾ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಯುನೈಟೆಡ್‌ ಪೀಪಲ್ಸ್‌ ಪಾರ್ಟಿ ಲಿಬರಲ್‌ ಪಕ್ಷವು ಗೋಸೈಗೌವ್ನ್‌ ಮತ್ತು ತಮುಲ್‌ಪುರ್ ವಿಧಾನಸಭಾ ಕ್ಷೇತ್ರದಲ್ಲಿ‌ ಗೆಲುವು ದಾಖಲಿಸಿದೆ.

ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ.‌ ಮಧ್ಯಪ್ರದೇಶದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಎರಡು ಹಾಗೂ ಕಾಂಗ್ರೆಸ್‌ ಒಂದು ಕ್ಷೇತ್ರದಲ್ಲಿ ಗೆಲವು ದಾಖಲಿಸಿದೆ. ಮೆಘಾಲಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ ಎರಡು ಕ್ಷೇತ್ರದಲ್ಲಿ ಯುನೈಟೆಡ್‌ ಡೆಮಾಕ್ರಾಟಿಕ್‌ ಪಾರ್ಟಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಹಿಮಾಚಲ ಪ್ರದೇಶದ ಫತೇಪುರ್, ಅರ್ಕಿ ಮತ್ತು ಜುಬ್ಬಾಯಿ-ಕೊತ್ಕೈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.

ಬಿಹಾರದಲ್ಲಿ ಆಡಳಿತಾರೂಢ ಜೆಡಿಯು ಪಕ್ಷವು ಕುಷೇಶ್ವರ್‌ ಅಸ್ತಾನ್‌ ಮತ್ತು ತಾರಾಪುರ್ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ. ರಾಜಸ್ಥಾನದ ಎರಡೂ ಸ್ಥಾನ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಪಕ್ಷ ಗೆಲುವು ದಾಖಲಿಸಿದೆ.

ಮಹಾರಾಷ್ಟ್ರದ ದೆಗ್ಲೂರು(ಎಸ್‌.ಸಿ.) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ದಾಖಲಿಸಿದೆ. ಮಿಜೋರಾಂನ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮಿಜೋ ನ್ಯಾಷನಲ್‌ ಫ್ರೆಂಟ್‌ ಗೆಲುವು ದಾಖಲಿಸಿದೆ. ನಾಗಲ್ಯಾಂಡ್‌ ನಲ್ಲಿ ನ್ಯಾಷನಲಿಸ್ಟ್‌ ಡೆಮಾಕ್ರಟಿಕ್‌ ಪ್ರೋಗ್ರೆಸಿವ್‌ ಪಾರ್ಟಿ ಗೆಲುವು ದಾಖಲಿಸಿದೆ. ಹರಿಯಾಣದಲ್ಲಿ ಇಂಡಿಯನ್‌ ನ್ಯಾಷನಲ್‌ ಲೋಕ ದಳ್‌ ಪಕ್ಷ ಗೆಲುವು ಸಾಧಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದೆ.

ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಠೇವಣಿ ಕಳೆದುಕೊಂಡಿವೆ. ಪ್ರಮುಖ ಪ್ರತಿಪಕ್ಷವಾದ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

Donate Janashakthi Media

Leave a Reply

Your email address will not be published. Required fields are marked *