ಬೆಂಗಳೂರು: ಬಿಜೆಪಿ ಶುದ್ಧೀಕರಣ ಮಾಡುವುದು ನನ್ನ ಗುರಿ ಎಂದು ಬಿಜೆಪಿಯ ಹಿರಿಯ ನಾಯಕ ಡಿ ವಿ ಸದಾನಂದಗೌಡ ಸ್ವಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದರು. ಕರ್ನಾಟಕ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿವಿಎಸ್, ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ. ಕಾಂಗ್ರೆಸ್’ನಿಂದ ಆಹ್ವಾನ ಬಂದಿದ್ದು ನಿಜ, ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಆಹ್ವಾನ ಬಂದಿತ್ತು. ಆದರೆ ನಾನು, ಕಾಂಗ್ರೆಸ್ ಸೇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ನಾನು ಪಕ್ಷಕ್ಕಾಗಿ ಕೆಲಸ ಮಾಡಿದ ನಿಷ್ಠಾವಂತ ಕಾರ್ಯಕರ್ತ. ನಾನು ಸಿಂಗಲ್ ಮ್ಯಾನ್ ಆರ್ಮಿ ಅಲ್ಲ. ಪಕ್ಷದಲ್ಲಿ ಒಂದಷ್ಟು ಜನರು ಶುದ್ಧೀಕರಣ ಬಯಸುತ್ತಿದ್ದಾರೆ. ಅವರನ್ನು ಕ್ರೋಢೀಕರಿಸಲಾಗುತ್ತದೆ. ಪಕ್ಷದ ಜವಾಬ್ದಾರಿ ವಹಿಸಿದವರು ಸ್ವಾರ್ಥಿಗಳಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬ, ಮಕ್ಕಳು, ಜಾತಿ, ತನ್ನವರಿಗೆ ಸೀಮಿತ ಮಾಡಿದ್ದಾರೆ. ಮೋದಿಯವರ ಮೇರಾ ದೇಶ್ ಮೇರಾ ಪರಿವಾರ್ ಆಗಬೇಕು. ಆದರೆ, ಅದು ಆಗುತ್ತಿಲ್ಲ ಎಂದು ಬೇಸರ ಹೊರಹಾಕಿದರು.
ಇದನ್ನೂ ಓದಿ : ತಮ್ಮ ವಿರುದ್ದ ಸುದ್ದಿ ಪ್ರಕಟಿಸದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ಪಡೆದ ಸಚಿವ ಸದಾನಂದಗೌಡ ಕರ್ನಾಟಕ
ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯುವುದಿಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಶುದ್ದೀಕರಣ ಕಾರ್ಯಕ್ಕೆ ವೇಗ ಕೊಡಲಾಗುವುದು. ಯಾವುದೇ ಬೆಲೆ ತೆತ್ತಾದರೂ ನಾನು ಪಕ್ಷ ಶುದ್ದೀಕರಣ ಕೆಲಸ ಮಾಡುತ್ತೇನೆ. ಆಡಳಿತ ಮಾಡುವವರು ಸತ್ಯವಂತರಾಗಬೇಕು. ಸುಳ್ಳು ಹೇಳಬಾರದು. ಬೆಂಗಳೂರು ಉತ್ತರದಲ್ಲಿ ಟಿಕೆಟ್‌ಗಾಗಿ ಒಬ್ಬನ ಹೆಸರು ಮಾತ್ರ ಇತ್ತು. 142 ಜನರು ನನ್ನ ಹೆಸರನ್ನು ಆಯ್ಕೆ ಮಾಡಿದ್ದರು. ಆದರೆ, ಇದನ್ನು ಕೇಂದ್ರದಲ್ಲಿ ಮಂಡನೆ ಮಾಡಲು ಸಾಧ್ಯವಾಗದವರು ನಮ್ಮ ನಾಯಕರಲ್ಲ. ಕೆಎಸ್ ಈಶ್ವರಪ್ಪ ಈಗಾಗಲೇ ಹಲವಾರು ಸಂಗತಿಗಳನ್ನು ಹೇಳಿದ್ದಾರೆಂದು ತಿಳಿಸಿದರು.
ಒಕ್ಕಲಿಗ ಸಂಘದ ಭೇಟಿ ವಿಚಾರವಾಗಿ ಪ್ರಸ್ಥಾಪಿಸಿದ ಡಿವಿಎಸ್, ಒಕ್ಕಲಿಗ ಸಂಘದವರು ನಮ್ಮ ಸಮಾಜಕ್ಕೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಕಡಿಮೆ ಆಗ್ತಿದೆ ಎಂದಿದ್ದಾರೆ. ದೇವೇಗೌಡರ ಮೆಟೀರಿಯಲ್‌ಗೆ ಬಿಜೆಪಿ ತನ್ನ ಸ್ಟಿಕ್ಕರ್ ಅಂಟಿಸುತ್ತಿದೆ ಎಂದು ಒಕ್ಕಲಿಗ ಮುಖಂಡರು ನನ್ನೊಟ್ಟಿಗೆ ಚರ್ಚಿಸಿದ್ದಾರೆ ಎಂದರು.