ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಲಲಿತಾದ್ರಿಪುರದ ಹೊರವಲಯದಲ್ಲಿ ಅತ್ಯಾಚಾರ ಪ್ರಕರಣವೊಂದು ಮಂಗಳವಾರ ರಾತ್ರಿ ನಡೆದಿದೆ. ನಗರದ ವಿದ್ಯಾರ್ಥಿನಿಯ ಜೊತೆಗೆ ಬಂದಿದ್ದ ಸ್ನೇಹಿತನಿಗೆ ನಾಲ್ಕು ಅಥವಾ ಐದು ಮಂದಿ ಹಲ್ಲೆಯನ್ನು ಮಾಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. 4-5 ಜನರ ಬಗ್ಗೆ ಉಲ್ಲೇಖಿಸಿ ಪ್ರಕರಣವನ್ನು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದು, ಹೆಚ್ಚಿನ ಮಾಹಿತಿಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಹಿತನಿಂದಲೂ ಮಾಹಿತಿಗೆ ಮುಂದಾಗಿರುವ ಪೊಲೀಸರು ಆರೋಪಿಗಳ ಬಗ್ಗೆ ವಿಚಾರಣೆಯನ್ನು ಕೈಗೊಂಡಿದ್ದಾರೆ. ನಮ್ಮ ಜೊತೆ ಗಲಾಟೆ ಅವರುಗಳು ನನ್ನ ತಲೆಗೆ ಕಲ್ಲಿನಿಂದ ಹೊಡೆದ ಪರಿಣಾಮವಾಗಿ ನಾನು ನಾನು ಪ್ರಜ್ಞೆ ತಪ್ಪಿ ಬಿದ್ದೆ. ಇದೇ ಸಂದರ್ಭದಲ್ಲಿ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದರು ಎಂದು ಯುವಕ ಹೇಳಿದ್ದಾನೆ.
ಲಲಿತಾದ್ರಿಪುರದ ಹೊರವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಂದ ಪರಿಶೀಲನೆ ನಡೆಸಿದ್ದಾರೆ. ನಿರ್ಜನ ಪ್ರದೇಶವಾಗಿರುವ ಘಟನಾ ಸ್ಥಳದಲ್ಲಿ ಪಾನಮತ್ತರಾಗಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿ ಯುವಕನೊಂದಿದೆ ಪ್ರದೇಶಕ್ಕೆ ಬಂದಿದ್ದರು. ನಿನ್ನೆ (ಆಗಸ್ಟ್ 24) ರಂದು 7 ಗಂಟೆ ಸುಮಾರಿಗೆ ಅತ್ಯಾಚಾರ ನಡೆದಿರಬಹುದು ಎನ್ನಲಾಗಿದೆ.
ಸಚಿವ ಸೋಮಶೇಖರ್ ನೇತೃತ್ವದಲ್ಲಿ ಸಭೆ
ಘಟನೆಗೆ ಸಂಬಂಧಿಸಿದಂತೆ ಹಾಗೂ ದರೋಡೆಕೋರರಿಂದ ವ್ಯಕ್ತಿಯ ಮೇಲೆ ಗುಂಡಿನ ಧಾಳಿಯ ಬಗ್ಗೆ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಚಿವರು ಎರಡು ಘಟನೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.