ಕಟ್ಟಡ ನಿರ್ಮಾಣ ಕಾರ್ಮಿಕರಲ್ಲದ ನಕಲಿ ಫಲಾನುಭವಿಗಳ ಗುರುತಿನ ಚೀಟಿ ರದ್ದತಿಗೆ ಅಭಿಯಾನ; ಕಾರ್ಮಿಕ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ದುಡಿಮೆ ಮಾಡುತ್ತಿರುವ ಕಾರ್ಮಿಕರಿಗಾಗಿ ಮಾತ್ರ ಮೀಸಲಾಗಿರುವ ಕಾರ್ಮಿಕ ಕಾರ್ಡ್ ಈ ವಿಭಾಗದ ಕಾರ್ಮಿಕರಲ್ಲದವರೂ ಪಡೆದುಕೊಂಡಿರುವ ಪ್ರಮಾಣ ಹೆಚ್ಚಿಗೆ ಇದೆ. ಅನರ್ಹರು ಪಡೆದಿರುವ ಗುರುತಿನ ಚೀಟಿ ರದ್ದುಪಡಿಸುವುದಲ್ಲದೇ, ಅಂಥಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸರಕಾರ ಮುಂದಾಗಿದೆ.

ನಕಲಿ ಫಲಾನುಭವಿಗಳ ಗುರುತಿನ ಚೀಟಿ ರದ್ದುಗೊಳಿಸಲು ಅಭಿಯಾನ ಆರಂಭಿಸಿರುವ ಕಾರ್ಮಿಕ ಇಲಾಖೆಯು  ನಕಲಿ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಲ್ಲುತ್ತಿದ್ದ ಸೌಲಭ್ಯಗಳನ್ನು ರದ್ದು ಮಾಡಲು ಇಲಾಖೆ  ಮುಂದಾಗಿದೆ.

ಇದನ್ನು ಓದಿ: ನಮಗೆ ನೆರಳು ನೀಡುವ ಕಟ್ಟಡ ಕಾರ್ಮಿಕರು ಬೀದಿಯಲ್ಲಿದ್ದಾರೆ – ವೆಂಕಟೇಶ್ ಗೌಡ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಇಲಾಖೆ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅನರ್ಹ ಫಲಾನುಭವಿಗಳ ಕಾರ್ಮಿಕ ಕಾರ್ಡ್ ರದ್ದತಿ ಅಭಿಯಾನ ಕೈಗೊಂಡಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಕಾರ್ಮಿಕ ಕಾರ್ಡ್‌ಗಳನ್ನು ಕಟ್ಟಡ ಕಾರ್ಮಿಕರು ಮತ್ತು ಸಂಬಂಧಿತ ವಿಭಾಗಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ನೀಡಲಾಗುತ್ತದೆ. ವಸತಿ, ವಾಣಿಜ್ಯ ಮತ್ತು ಸರ್ಕಾರಿ ಸೇರಿದಂತೆ ಎಲ್ಲಾ ನಿರ್ಮಾಣ ಯೋಜನೆಗಳಿಗೆ ಶೇ 1 ರಷ್ಟು ಸೆಸ್ ವಿಧಿಸಲಾಗುತ್ತದೆ. ಇದರಿಂದ ಪ್ರತಿ ವರ್ಷ 800 ರಿಂದ 1000 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತದೆ. ಈ ಹಣವನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ.

ಇದನ್ನು ಓದಿ: ಕಟ್ಟಡ ಕಾರ್ಮಿಕರ ನಿಧಿ ದೋಚಲು ಸಚಿವರು-ಶಾಸಕರ ಹೊಂಚು: ಬಾಲಕೃಷ್ಣ ಶೆಟ್ಟಿ

ರಾಜ್ಯದಲ್ಲಿ ಸರಿಸುಮಾರು 40 ಲಕ್ಷ ನೋಂದಾಯಿತ ಗುರುತಿನ ಚೀಟಿ ಹೊಂದಿರುವವರು ಇದ್ದಾರೆ. ಅವರಲ್ಲಿ ಬಹುತೇಕ ಮಂದಿ ಆರೋಗ್ಯ, ಶಿಕ್ಷಣ, ವಸತಿ, ಪಿಂಚಣಿ ಸೇರಿದಂತೆ ವಿವಿಧ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆಧಾರ್ ಮತ್ತು ಕಾರ್ಮಿಕ ಕಾರ್ಡ್‌ನಿಂದ ಸಕ್ರಿಯಗೊಳಿಸಲಾದ ನೇರ ಹಣ ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಸೌಲಭ್ಯದ ಮೊತ್ತವನ್ನು ವರ್ಗಾಯಿಸಲಾಗುತ್ತಿದೆ. ಆದರೆ ಅರ್ಹರಲ್ಲದವರಿಗೂ ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಇದನ್ನು ತಡೆಯಲು  ಅಭಿಯಾನ ಆರಂಭಿಸಲಾಗಿದೆ.

ಪ್ರತಿ ತಾಲೂಕಿನಲ್ಲಿ ಅಧಿಕಾರಿಗಳ ತಂಡಗಳು ಕಾರ್ಮಿಕ ಗುರುತಿನ ಚೀಟಿ ಮತ್ತು ಫಲಾನುಭವಿಗಳ ಸಂಪೂರ್ಣ ವಿವರಗಳನ್ನು ಕಲೆ ಹಾಕಲಿದ್ದುಇ, ಪರಿಶೀಲನೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ಎಂ ಪಿ ಮಾಧ್ಯಮದವರೊಂದಿಗೆ ಮಾತನಾಡಿ, ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ಉದ್ಯಮಗಳಲ್ಲದ ಗಾರ್ಮೆಂಟ್ಸ್ ಕಾರ್ಮಿಕರು ಸೇರಿದಂತೆ ಇತರರು ಕೂಡ ಗುರುತಿನ ಚೀಟಿ ಮಾಡಿಸಿಕೊಂಡಿರುವುದು ನಮಗೆ ಮಾಹಿತಿ ಬಂದಿದೆ. ಗುರುತಿನ ಅರ್ಹತೆ ಪಡೆಯಲು ಒಬ್ಬರು ನಿರ್ಮಾಣ ಉದ್ಯಮದಲ್ಲಿ ಆರ್ಥಿಕ ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಬೇಕು. ಆದರೆ, ಕೆಲ ವ್ಯಕ್ತಿಗಳು ಕಟ್ಟಡ ಕಾರ್ಮಿಕರು ಎಂದು ಹೇಳಿಕೊಂಡು ನಕಲಿ ಕೆಲಸದ ಅನುಭವದ ದಾಖಲೆಗಳನ್ನು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಇಎಸ್‌ಐ, ಪಿಎಫ್ ಸೌಲಭ್ಯಗಳನ್ನೂ ಪಡೆದುಕೊಂಡಿರುವುದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *