SIR ಶಾಕ್: 22 ಲಕ್ಷ ಮತದಾರರ ಹೆಸರು ಡಿಲೀಟ್!

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರಡು ಪ್ರಕ್ರಿಯೆಯಡಿ ನಾಲ್ಕು ರಾಜ್ಯಗಳಲ್ಲಿ ಒಟ್ಟು 22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ರಾಜ್ಯವಾರು ಅಂಕಿಅಂಶಗಳ ಪ್ರಕಾರ, ಒಡಿಶಾದಲ್ಲಿ ಅತಿ ಹೆಚ್ಚು 20 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಇದರ ನಂತರ ಮಣಿಪುರದಲ್ಲಿ 1,58,677, ಮಿಜೋರಾಂನಲ್ಲಿ 46,162 ಹಾಗೂ ಸಿಕ್ಕಿಂನಲ್ಲಿ 37,724 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ: ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಈ ನಡುವೆ, SIR ಮೂರನೇ ಹಂತವು ಪ್ರಸ್ತುತ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದೆ. ಅಂತಿಮ ಮತದಾರರ ಪಟ್ಟಿ ಸೆಪ್ಟೆಂಬರ್ 6ರಂದು ಪ್ರಕಟವಾಗಲಿದೆ.

ಮಾಹಿತಿಯ ಪ್ರಕಾರ, ಮೊದಲ ಎರಡು ಹಂತಗಳಲ್ಲಿ 13 ರಾಜ್ಯಗಳಾದ್ಯಂತ ಒಟ್ಟು 5.8 ಕೋಟಿ ಮತದಾರರನ್ನು ಪಟ್ಟಿಯಿಂದ ವಜಾಗೊಳಿಸಲಾಗಿದೆ.

ಇದನ್ನೂ ನೋಡಿ: ಆರ್‌ಎಸ್‌ಎಸ್‌ ನೋಂದಣಿ ಸುತ್ತಮುತ್ತ: ಎದ್ದಿರುವ ಪ್ರಶ್ನೆಗಳೇನು?

Donate Janashakthi Media

Leave a Reply

Your email address will not be published. Required fields are marked *