ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ʻನಮ್ಮ ಕ್ಲಿನಿಕ್ʼ ಯೋಜನೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭಿಸಿದಲು ಸಾಕಷ್ಟು ತೊಡಕುಗಳು ಎದುರಾಗಿದೆ. ಒಂದೆಡೆ ಜಾಗದ ಕೊರತೆಯನ್ನು ಎದುರಿಸುತ್ತಿರುವ ಬಿಬಿಎಂಪಿಯು, ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಅಲ್ಲದೆ, ನಮ್ಮ ಕ್ಲಿನಿಕ್ ನಲ್ಲಿ ಉದ್ಯೋಗ ಖಾಲಿ ಇದೆ ಬನ್ನಿ ಅಂದರೂ ಬರುತ್ತಿಲ್ಲವಂತೆ. ಹೀಗಾಗಿ ಸರ್ಕಾರಿ ಕೋಟಾದ ವೈದ್ಯರ ಮೊರೆ ಹೋಗಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 2ನೇ ವಾರದಿಂದ ರಾಜ್ಯದಲ್ಲಿ 114 ಕಡೆ ನಮ್ಮ ಕ್ಲಿನಿಕ್ ಆರಂಭ ಆಗಿದೆ. ಆದರೆ ಬೆಂಗಳೂರಿನಲ್ಲಿ ಜಾಗದ ಕೊರತೆ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ನಿಧಾನವಾಗುತ್ತಿದೆ ಎನ್ನಲಾಗಿದೆ. ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ವಿಶೇಷ ಸೌಲಭ್ಯ ನೀಡಬೇಕೆಂದು ಬಿಬಿಎಂಪಿಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಇದನ್ನು ಓದಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಶುಲ್ಕ-ದತ್ತಾಂಶ ಸಂಗ್ರಹ ಪಾರದರ್ಶಕತೆ ಇಲ್ಲ; ಡಾ.ಸುಧಾಕರ್
ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ಮುಂದಾಗಿರುವ ಬಿಬಿಎಂಪಿಯು, ಈ ಯೋಜನೆಯಡಿ ಕಾರ್ಯನಿರ್ವಹಿಸಲು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಬಿಬಿಎಂಪಿಗೆ ಸವಾಲಾಗಿದ್ದು, ಸರ್ಕಾರಕ್ಕೆ ಪತ್ರ ಬರೆದು ಸರ್ಕಾರಿ ಕೋಟಾದಡಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿರುವವರನ್ನು ಒಂದು ವರ್ಷದ ಮಟ್ಟಿಗೆ ನಮ್ಮ ಕ್ಲಿನಿಕ್‍ನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕೊಡಿ ಎಂದು ಕೋರಿದೆ. ವೈದ್ಯಕೀಯ ಕೋರ್ಸ್ ಮುಗಿಸಿರುವ ವೈದ್ಯರನ್ನು ನಿಯೋಜಿಸಲು ಪತ್ರ ಬರೆಯಲಾಗಿದೆ. ಇದಕ್ಕೆ ಸರ್ಕಾರ ಸ್ಪಂದಿಸಿದ್ದು ವೈದ್ಯರನ್ನ ನೀಡುವ ಭರವಸೆ ನೀಡಿದೆಯಂತೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆ ಅಧಾರದ ಮೇಲೆ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ನೀಟ್ ಪರೀಕ್ಷೆಯೂ ಅಡ್ಡಿಯಾಗಿದೆ. ನೀಟ್ ಪರೀಕ್ಷೆಗೆ ಸಿದ್ಧವಾಗುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು ಯಾರು ನಮ್ಮ ಕ್ಲಿನಿಕ್‍ಗಳಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ ಎಂದು ತಿಳಿದುಬಂದಿದೆ. ಒಟ್ಟಾರೆ ನಮ್ಮ ಕ್ಲಿನಿಕ್‍ನಲ್ಲಿ ಕೆಲಸ ಮಾಡುಲು ಸಿಬ್ಬಂದಿ ನೇಮಕಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದ್ದು, ಜನವರಿಯಲ್ಲೇ ಬೆಂಗಳೂರಿನಲ್ಲಿ ನಮ್ಮ ಕ್ಲಿನಿಕ್ ಆರಂಭವಾಗುವುದು ಅನುಮಾನವಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ