2026ರ ಮೇನಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಕಾರ್ಯಾರಂಭ: ಡಿಕೆಶಿ

ಬೆಂಗಳೂರು: 2026ರ ಮೇನಲ್ಲಿ ನಮ್ಮ ಮೆಟ್ರೋದ ಪಿಂಕ್ ಲೈನ್ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವೆಂಬರ್‌ 3ರಂದು ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಘೋಷಿಸಿದ್ದಾರೆ.

ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ: ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅಕ್ಕ ಪಡೆ ಪ್ರಾರಂಭ: ಲಕ್ಷ್ಮಿ ಹೆಬ್ಬಾಳ್ಕರ್

‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ಅವರು ಹೇಳಿದರು.

ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗವಾಗಿದೆ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಇನ್ನುಳಿದ ಆರು ನಿಲ್ದಾಣಗಳು ಎಲ್ಲರಿಸಿದ ಮಾರ್ಗದಲ್ಲಿ ಇವೆ.

ಇದನ್ನೂ ನೋಡಿ: ನಿರಂಜನರುಸಾಹಿತ್ಯ ತಾಳಬಹುದಾದ ಎಲ್ಲಾ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದವರು – ಪ್ರತಿಭಾ ಭಟ್ Janashakthi Media

Donate Janashakthi Media