ಬೆಂಗಳೂರು: ರಾಜ್ಯದ ಜನತೆಗೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂಪಾಯಿ ಏರಿಕೆ ಮಾಡಿ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ ಏರಿಕೆಗೆ ಅನುಮೋದನೆ ದೊರಕಿದೆ.
ಇದನ್ನೂ ಓದಿ: ಅಕ್ರಮ ಮರ ಕಡಿತದ ಶಿಕ್ಷೆ ಪ್ರಮಾಣ ಹತ್ತುಪಟ್ಟು ಹೆಚ್ಚು: ಈಶ್ವರ ಖಂಡ್ರೆ
ಈಗಾಗಲೇ ರಾಜ್ಯ ಸರ್ಕಾರ ಕೆಎಸ್‌ಆರ್ಟಿಸಿ ಮತ್ತು ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಜಜನರಿಗೆ ಗಾಯದ ಮೇಲೆ ಬರೆ ಎಳೆದಿದೆ.
ಇದನ್ನೂ ನೋಡಿ: ತರಬೇತಿ! ತರಬೇತಿ! ಕಲಿಸಲಾಗದ ಅಸಹಾಯಕ ಸ್ಥಿತಿಯಲ್ಲಿ ಶಿಕ್ಷಕ! – ಸಿ.ಆರ್.ಬಾಬುಖಾನ್ ಮತ್ತು ಗುರುರಾಜ ದೇಸಾಯಿ ಮಾತುಕತೆ