ನರೇಗಾ ಕಾರ್ಮಿಕರಿದ್ದ ವಾಹನ ಪಲ್ಟಿ; 28 ಮಂದಿಗೆ ಗಾಯ

ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿಯಾದ ಪರಿಣಾಮ 28 ಜನರಿಗೆ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ. ಕಾರ್ಮಿಕರಿದ್ದ

ಕಾರಟಗಿಯ ಬರಗೂರು ಕಮಾನ್ ಬಳಿ ವೇಗವಾಗಿ ಬಂದ ಟಾಟಾ ಏಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ವಾಹನದಲ್ಲಿ ತೆರಳುತ್ತಿದ್ದ 28 ನರೇಗಾ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ.

ಇದನ್ನೂ ಓದಿ: IMF ಮನೆಗೆ ಕಳಿಸಿದ ‘ಆರ್ಥಿಕ ಸಲಹೆಗಾರ’ನ ಹಗರಣ : ಯೂನಿಯನ್ ಬ್ಯಾಂಕ್ ನಿಂದ 7.5 ಕೋಟಿ ರೂ ಪುಸ್ತಕ ಖರೀದಿ !

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ನೋಡಿ: 25 ಕೋಟಿ ಜನಸಂಖ್ಯೆಯನ್ನು ಬಡತನದಿಂದ ಹೊರ ತಂದಿರುವುದಾಗಿ ಹೇಳುತ್ತಿರುವ ಮೋದಿ ಸರ್ಕಾರ ? ವಾಸ್ತವವೇನು?‌

Donate Janashakthi Media

Leave a Reply

Your email address will not be published. Required fields are marked *