3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಎನ್‌ಡಿಎ ಮೈತ್ರಿಕೂಟದಿಂದ ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಪ್ರಮಾಣ ವಚನ ಸ್ವೀಕರಿಸಿದರು.

ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸಂಸದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಅವರು ನಿತೀಶ್ ಕುಮಾರ್ ಅವರ ಜೆಡಿಯು ಕೋಟಾದಿಂದ ಮೋದಿ ಸಂಪುಟಕ್ಕೆ ಸೇರ್ಪಡೆಯಾದರು.

ಅಸ್ಸಾಂನ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಸಭೆ ಸಂಸದ ಸರ್ಬಾನಂದ್ ಸೊನೊವಾಲ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದ ಮಧ್ಯಪ್ರದೇಶದ ಬಿಜೆಪಿ ಸಂಸದ ಡಾ ವಿರೇಂದ್ರ ಕುಮಾರ್ ಖಾಟಿಕ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.

ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಪು ರಾಮ್ ಮೋಹನ್ ನಾಯ್ಡು ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಕಾಕುಳಂ ಕ್ಷೇತ್ರದ ಸಂಸದರಾಗಿರುವ ನಾಯ್ಡು, 36ನೇ ವಯಸ್ಸಿನಲ್ಲಿಯೇ ಕೇಂದ್ರ ಸಚಿವರಾಗುವ ಅವಕಾಶ ಪಡೆದಿದ್ದಾರೆ.

ಕರ್ನಾಟಕದಿಂದ ಐವರಿಗೆ ಅಧಿಕಾರ ದೊರಕಿದೆ. ಹಿಂದೆ ಮಂತ್ರಿಗಳಾಗಿ ನಿರ್ಮಲಾ ಸೀತಾರಾಮನ್‌, ಪ್ರಲ್ಜಾದ ಜೋಶಿ, ಶೋಭಾ ಕರಂದ್ಲಾಜೆ ಮತ್ತೊಂದು ಅವಕಾಶವನ್ನು ಪಡೆದುಕೊಂಡಿದ್ಧಾರೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಿತ್ರ ಪಕ್ಷ ಜೆಡಿಎಸ್‌ ಕೋಟಾದಲ್ಲಿ ಸಚಿವರಾದರೆ, ಮಾಜಿ ಸಚಿವ ಹಾಗೂ ತುಮಕೂರು ಕ್ಷೇತ್ರದಿಂದ ಸಂಸದರಾಗಿರುವ ವಿ.ಸೋಮಣ್ಣ ಅವರು ಕೇಂದ್ರದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

 

Donate Janashakthi Media

Leave a Reply

Your email address will not be published. Required fields are marked *