ಮಿದುಳು ನಿಷ್ಕ್ರಿಯ: ನಟ ಶಿವರಾಂ​ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಬೆಂಗಳೂರು: ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ಅನಾರೋಗ್ಯಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬೆಂಗಳೂರಿನ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್​ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರು ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಶಿವರಾಮ್‌ ಅವರ ಆರೋಗ್ಯ ಸಾಕಷ್ಟು ಗಂಭೀರವಾಗಿದ್ದು ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆಸ್ಪತ್ರೆಗೆ ಚಿತ್ರರಂಗದ ಅನೇಕ ಹಿರಿಯ ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಅವರು ಬೇಗ ಗುಣಮುಖರಾಗಲಿ ಎಂದು ಹೇಳುತ್ತಿದ್ದಾರೆ.

ಶಿವರಾಂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ನಟನ ಆರೋಗ್ಯದ ಕುರಿತು ಮಾಹಿತಿ ನೀಡಿರುವ ವೈದ್ಯರು, ಶಿವರಾಂ ಆರೊಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ಸದ್ಯ ನಿನ್ನೆ ಹೇಗಿದ್ರೋ ಇಂದೂ ಹಾಗೇ ಇದ್ದಾರೆ. ನುರಿತ ವೈದ್ಯರು ಪರೀಕ್ಷೆ ಮಾಡಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಮಿದುಳು ನಿಷ್ಕ್ರಿಯಗೊಂಡಿದೆ. ಈಗಾಗಲೇ ಅವರು ಕೋಮಾ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ತಪಾಸಣೆ ನಿರಂತರವಾಗಿ ನಡೆಯುತ್ತಿದೆ’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇಂದು ಕೂಡ ಶಿವರಾಂ ಅವರನ್ನು ನೋಡಲು ಅನೇಕ ಕಲಾವಿದರು ಆಗಮಿಸುವ ನಿರೀಕ್ಷೆ ಇದೆ.

84 ವರ್ಷದ ಶಿವರಾಂ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದ್ದು ಯಾಕೆ ಎಂಬುದನ್ನು ಪ್ರಶಾಂತ್​ ಆಸ್ಪತ್ರೆ ವೈದ್ಯ ಮೋಹನ್​ ಅವರು ‘ಶಿವರಾಂ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಮಹಡಿಯ ಮೇಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿದೆ. ಅವರ ಮಗ ಮತ್ತು ಮೊಮ್ಮಗಳು ಆಸ್ಪತ್ರೆಗೆ ಕರೆದುಕೊಂಡು ಬಂದರು. ಎಂಆರ್​ಐ ಸ್ಕ್ಯಾನ್​ ಮಾಡಿದಾಗ ತಲೆ ಒಳಗೆ ಪೆಟ್ಟು ಬಿದ್ದಿರುವುದು ತಿಳಿಯಿತು’ ಎಂದು ಹೇಳಿದರು.

ಸತತ ಆರು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಶಿವರಾಂ ಅವರು ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *