ದಾವಣಗೆರೆ: ಚನ್ನಗಿರಿ ತಾಲೂಕಿನ ಕೆಂಗಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ಪಕ್ಷ ಉಳಿದಿರುವುದು, ಬೆಳೆಯುತ್ತಾ ಇರುವುದು ಅಲ್ಲೊಬ್ಬ, ಇಲ್ಲೊಬ್ಬ ನಾಯಕನಿಂದ ಅಲ್ಲ. ಕೋಟ್ಯಂತರ ಜನರ ಪರಿಶ್ರಮದಿಂದ ಎಂದು ಹೇಳಿದರು.
ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಮಾತನಾಡುತ್ತದೆ. ಪಕ್ಷಕ್ಕೆ ಡ್ಯಾಮೇಜ್ ಆಗುವಂತೆ ಯಾರೂ ಮಾತನಾಡಬಾರದು ಎಂದರು. ಜಾತಿಗಣತಿ ವರದಿ ಬಿಡುಗಡೆ ರಾಷ್ಟ್ರೀಯ ನಿಲುವು ಎಂದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢ – ವೈರಸ್ ಹರಡದಂತೆ ಜಿಲ್ಲಾಡಳಿತ ಸಜ್ಜು
ನೂರಕ್ಕೆ ನೂರರಷ್ಟು ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಜಾತಿಗಣತಿ ಬಿಡುಗಡೆ ಪರವಾಗಿದೆ ಎಂದರು.
ಇದನ್ನೂ ನೋಡಿ: ಆಧುನಿಕ ಸಾಧನ ಹಾಗೂ ತಂತ್ರಜ್ಞಾನದಿಂದಾಗಿ ಯುವಪೀಳಿಗೆ ಓದಿನಿಂದ ಸಂಪೂರ್ಣ ವಿಮುಖರಾಗುತ್ತಿದ್ದಾರೆJanashakthi Media