ಬೆಂಗಳೂರು: ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಕೆಲ ಮಂದಿ ಆರಂಭಿಸಿರುವ #NationalUnemploymentDay ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ.
.@narendramodi ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ.
ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ.
ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು?
ದೇಶದ ಯುವಜನ ಕೇಳುತ್ತಿದ್ದಾರೆ.
2/2#NationalUnemploymentDay pic.twitter.com/TJk81IIO4z— Siddaramaiah (@siddaramaiah) September 17, 2020
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಹುಟ್ಟುಹಬ್ಬ: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆದ ನಿರುದ್ಯೋಗ ದಿನ
ಈ ಕುರಿತು ಟ್ವೀಟ್ ಮಾಡಿರುವ ಅವರು, ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ,’ ಎಂದಿದ್ದಾರೆ.
ಇದೇ ಟ್ವೀಟ್‌ನಲ್ಲಿ ಅವರು #NationalUnemploymentDay ಟ್ಯಾಗ್ ಬಳಸಿದ್ದಾರೆ.