ನೀಟ್ ಪರೀಕ್ಷಾ ಅಕ್ರಮ : ವಿದ್ಯಾರ್ಥಿಗಳಿಂದ ರಾಷ್ಟ್ರವ್ಯಾಪಿ ಮುಷ್ಕರ

ಬೆಂಗಳೂರು : ಯುಜಿಸಿ – ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಇಂದು ವಿದ್ಯಾರ್ಥಿ ಸ<ಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಅನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ ಜಾರಿಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಹಾವೇರಿ, ಕೊಪ್ಪಳ, ವಿಜಯ ನಗರ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜೂನ್ 4 ರಂದು ಘೋಷಿಸಲಾದ ನೀಟ್ ಪರೀಕ್ಷೆಯ ಫಲಿತಾಂಶಗಳು ಸರಿಯಾದ ಪಾರದರ್ಶಕತೆ ಇಲ್ಲದೆ ಮತ್ತು ಪೇಪರ್ ಸೋರಿಕೆಯಂತಹ ದೂರುಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಭಾದಿತರಾಗಿದ್ದರು.ಇದರ ಜೊತೆಗೆ, ಲಕ್ಷಗಟ್ಟಲೆ ವಿದ್ಯಾರ್ಥಿಗಳು ಹಾಜರಾಗಿದ್ದ ಯುಜಿಸಿ ನೆಟ್ ಪರೀಕ್ಷೆಯು ಪೇಪರ್ ಸೋರಿಕೆ ವರದಿಗಳಿಂದ ರದ್ದುಗೊಳಿಸಲಾಯಿತು. ಇದಲ್ಲದೆ, ನೇರವಾಗಿ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಸಹ ಪ್ರೆಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಬಗ್ಗೆ ಉಲ್ಲೇಖಿಸಿ NEET-PG ಮರು ಪ್ರವೇಶ ಪರೀಕ್ಷೆಗಳನ್ನು ಕೊನೆಯ ಕ್ಷಣದಲ್ಲಿ ಮುಂದೂಡಲು ನಿರ್ಧರಿಸಲಾಯಿತು ಎಂದು ಎಸ್‌ಎಫ್‌ಐ ಆರೋಪಿಸಿದೆ.

ಕೋಚಿಂಗ್ ಸೆಂಟರ್ ಗಳ ಪ್ರೋತ್ಸಾಹಿಸುವಿಕೆಯನ್ನು ಸಿಯುಇಟಿ, ನೀಟ್ ನಂತಹ ಕೇಂದ್ರೀಕೃತ ಪರೀಕ್ಷೆಗಳ ಪಾಲಿಸಿಗಳಿಂದ ಶಿಕ್ಷಣದ ಖಾಸಗೀಕರಣ ಹೆಚ್ಚುತ್ತಿದೆ. ಇದರಿಂದ ಕೋಟ್ಯಾಂತರ ತಳ ಸಮುದಾಯದ ಹಾಗೂ ಮಾಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದುಬಾರಿಯಾಗಿದೆ.’ಒಂದು ರಾಷ್ಟ್ರ, ಒಂದು ಪರೀಕ್ಷೆ’ ಎಂಬ ಘೋಷಣೆಯ ಅಡಿಯಲ್ಲಿ, ಇಡೀ ಪರೀಕ್ಷಾ ವ್ಯವಸ್ಥೆಯು ಕುಸಿದಿದೆ ಮತ್ತು ಅನಿರ್ದಿಷ್ಟ ಅವಧಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ್‌ ಕಡಗದ್‌ ಆರೋಪಿಸಿದ್ದಾರೆ.

‘ ದಿ ಟೆಲಿಗ್ರಾಫ್ ‘ ಪತ್ರಿಕೆಯ ವರದಿಯ ಪ್ರಕಾರ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 25 ಸಾರ್ವಜನಿಕ ಪರೀಕ್ಷೆಗಳನ್ನು 25 ಕ್ಕಿಂತ ಕಡಿಮೆ ಖಾಯಂ ಸಿಬ್ಬಂದಿಗಳೊಂದಿಗೆ ನಿರ್ವಹಿಸುತ್ತದೆ, ಎನ್ ಟಿ ಎ ಪುನರಾವರ್ತಿತ ವೈಫಲ್ಯಗಳು ವಿದ್ಯಾರ್ಥಿಗಳಿಗೆ ಆತಂಕವನ್ನು ಸೃಷ್ಟಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಅಮೂಲ್ಯ ಸಮಯ, ಶ್ರಮ ಮತ್ತು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವ್ಯರ್ಥ ಮಾಡುತ್ತಿದೆ. ವಿದ್ಯಾರ್ಥಿಗಳ ಬಗ್ಗೆ ತೋರುವ ನೀರ್ದಾಕ್ಷೀಣ್ಯ ನಿರ್ಲಕ್ಷ್ಯವು ಅಕ್ರಮಗಳ ಬಗ್ಗೆ ಪಾರದರ್ಶಕತೆ, ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸುತ್ತದೆ. ಹಾಗೆಯೇ ಶಿಕ್ಷಣ ಸಚಿವಾಲಯದಲ್ಲಿನ ರಚನಾತ್ಮಕ ಬದಲಾವಣೆಯನ್ನು ವಿದ್ಯಾರ್ಥಿಗಳು ಬಯಸುತ್ತಾರೆ ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಭೀಮನಗೌಡ ತಿಳಿಸಿದ್ದಾರೆ.

ಇದನ್ನು ಓದಿ : ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ

 

ಉನ್ನತ ಶಿಕ್ಷಣದಲ್ಲಿನ ಸಮಸ್ಯೆಗಳು ಅಷ್ಟೇ ಅಲ್ಲದೆ, ಶಾಲಾ ಶಿಕ್ಷಣದ ಸಮಸ್ಯೆಗಳನ್ನು ಪ್ರತ್ಯೇಕಿಸುವಂತಿಲ್ಲ. ಬಿಜೆಪಿ ನೇತೃತ್ವದ ಎನ್ ಡಿ ಎ ಅವಧಿಯಲ್ಲಿ ಶಿಕ್ಷಣಕ್ಕೆ ಸಂಭಂದಪಟ್ಟ ಇಲಾಖೆಗಳಿಗೆ ಬಜೆಟ್ ನಲ್ಲಿ ಹಣ ಕಡಿತ ಮಾಡಿರುವುದು, ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಒಟ್ಟು ದಾಖಲಾತಿಯಲ್ಲಿ ಕುಸಿದಿರುವುದನ್ನು ಕಾಣಬಹುದಾಗಿದೆ. 2018-19 ಮತ್ತು 2021-22 ರ ನಡುವೆ ಭಾರತದಲ್ಲಿ ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ 61885 ರಷ್ಟು ಕಡಿಮೆಯಾಗಿವೆ.

ಒಟ್ಟು 15,51,000 ಶಾಲೆಗಳಿಂದ 14,89,115 ಶಾಲೆಗಳಿಗೆ ಕುಸಿದಿದೆ. ಒಟ್ಟು 61361 ಶಾಲೆಗಳನ್ನು ಮುಚ್ಚಲಾಗಿದೆ. ಸರ್ಕಾರಿ ಶಾಲೆಗಳ ಸಂಖ್ಯೆಯಲ್ಲಿ ವಿಪರೀತ ಕುಸಿತ ಹಾಗೂ ಖಾಸಗಿ ಶಾಲೆಗಳ ಸಂಖ್ಯೆಯಲ್ಲಿ ಅಗಾಧ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಬಡ – ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿಸುವ ಹುನ್ನಾರವಾಗಿದೆ. ಅತಿಯಾದ ಖಾಸಗೀಕರಣದಿಂದ ವಿದ್ಯಾರ್ಥಿಗಳು ಶುಲ್ಕವನ್ನು ಬರಿಸಲು ಸಾಧ್ಯವಾಗದೇ ಶಿಕ್ಷಣದಿಂದ ದೂರ ಉಳಿಯುತ್ತಾರೆ. ಶಿಕ್ಷಣ ಮತ್ತು ಪ್ರಜಾಪ್ರಭುತ್ವದ ಮೇಲಿನ ನಿರಂತರ ದಾಳಿಯನ್ನು ವಿರೋಧಿಸಿ, 7 ಬೇಡಿಕೆಗಳ ಪಟ್ಟಿಯನ್ನು ಈಡೇರಿಸಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ.

ಬೇಡಿಕೆಗಳು :

  • ಎನ್ ಟಿ ಎ ಯನ್ನು ರದ್ದುಗೊಳಿಸಬೇಕು.
  • ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು.
  • ಇತ್ತೀಚಿಗೆ ನೆಟ್ ಮತ್ತು ನೀಟ್ ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಒದಗಿಸಬೇಕು.
  • ಪಿಹೆಚ್ಡಿ ಪ್ರವೇಶಾತಿ ಪರೀಕ್ಷೆಗೆ ನೆಟ್ ಪರೀಕ್ಷೆ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು ಎನ್ನುವ ನಿಯಮವನ್ನು ವಾಪಸ್ಸು ಪಡೆಯಬೇಕು.
  • ⁠ಪರೀಕ್ಷೆಗಳನ್ನು ಕೇಂದ್ರೀಕರಣ ಗೊಳಿಸುವುದನ್ನು ನಿಲ್ಲಿಸಬೇಕು. ಆಯಾ ರಾಜ್ಯಗಳಿಗೆ ಸ್ವಾಯತ್ತತೆಯನ್ನು ಒದಗಿಸಬೇಕು.
  • ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ದಾಳಿಗಳನ್ನು ನಿಲ್ಲಿಸಬೇಕು ಹಾಗೂ ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಬೇಕು.
  • ಸಾರ್ವತ್ರಿಕ ಶಿಕ್ಷಣ ವ್ಯೆವಸ್ಥೆಯನ್ನು ಬಲಪಡಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು.

 

ಇದನ್ನು ನೋಡಿ : NTA ಮಾಡಿದ ಎಡವಟ್ಟುಗಳು ಒಂದಲ್ಲ..! ಎರಡಲ್ಲ..!!Janashakthi Media

Donate Janashakthi Media

Leave a Reply

Your email address will not be published. Required fields are marked *