ಕುಕನೂರು ನವೋದಯ ವಿದ್ಯಾಲಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ

ವರದಿ : ಚನ್ನಯ್ಯ ಹಿರೇಮಠ

ಕುಕನೂರು : ಕುಕನೂರು ಪಟ್ಟಣದ ಹೊರವಲಯದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ದಲ್ಲಿರುವ 31 ವಿದ್ಯಾರ್ಥಿಗಳಿಗೆ ಮತ್ತು 3 ಶಿಕ್ಷಕರಿಗೆ ಕೋವಿಡ್ ದೃಢ ಪಟ್ಟಿರುವುದು ಆತಂಕವನ್ನು ಸೃಷ್ಟಿಸಿದೆ.

ನವೋದಯ ವಿದ್ಯಾಲಯದ ಮೂರು ಜನ ವಿದ್ಯಾರ್ಥಿಗಳಿಗೆ 3 ದಿನಗಳ ಹಿಂದೆ ಕೋವಿಡ್ ದೃಢಪಟ್ಟಿತ್ತು. ಇದರ ಪರಿಣಾಮವಾಗಿ ಆರೋಗ್ಯ ಇಲಾಖೆಯವರು ಶಾಲೆಯಲ್ಲಿರುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡಂತೆ ಒಟ್ಟು 610 ಮಂದಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ವಿದ್ಯಾಲಯದ ಆವರಣದಲ್ಲಿ ಒಟ್ಟು 31 ವಿದ್ಯಾರ್ಥಿಗಳು ಹಾಗೂ ಮೂರು ಜನ ಶಿಕ್ಷಕರಿಗೆ ಸೋಂಕು ದೃಢಪಟ್ಟಿರುವದನ್ನು ತಾಲೂಕು ಆರೋಗ್ಯ ಅಧಿಕಾರಿ ಸುನಿಲ್ ಕುಮಾರ್ ಚಿತ್ರಗಾರ ಖಚಿತಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ತಾಲೂಕ ಆರೋಗ್ಯ ಅಧಿಕಾರಿ, ಎಲ್ಲಾ ಸೋಂಕಿತರನ್ನು ತಳಕಲ್ಲ ಗ್ರಾಮದ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಗಿದ್ದು ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗುತ್ತದೆ. ಯಾವೊಬ್ಬ ಸೋಂಕಿತರಲ್ಲಿ ಗಂಭೀರ ಲಕ್ಷಣಗಳು ಕಂಡು ಬಂದಿರುವುದಿಲ್ಲ ಹಾಗಾಗಿ ಭಯಪಡುವ ಅಗತ್ಯವಿಲ್ಲ ಎಲ್ಲಾ ಸೋಂಕಿತರು ಶೀಘ್ರದಲ್ಲೇ ಗುಣಮುಖರಾಗಿದ್ದಾರೆ ಎಂದು ತಿಳಿಸಿದರಲ್ಲದೆ, ಪಾಲಕರು ಭಯಪಡುವ ಅಗತ್ಯವಿಲ್ಲವೆಂದು ಮನವಿ ಮಾಡಿಕೊಂಡರು. ಸ್ಥಳಕ್ಕೆ ಸಚಿವ ಹಾಲಪ್ಪ ಆಚಾರ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಧೈರ್ಯ ತುಂಬಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *