ನಾಯಕತ್ವ ಬದಲಾವಣೆ ಚರ್ಚೆಯೇ ನಡೆದಿಲ್ಲ: ನಳಿನ್‌ ಕುಮಾರ್ ಕಟೀಲ್

 

ಮಂಗಳೂರು: ರಾಜ್ಯದಲ್ಲಿ ಬಿಎಸ್‌ವೈ ನಾಯಕತ್ವವನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದರ ಬಗ್ಗೆ ರಾಜ್ಯ ಸಮಿತಿ, ಕೋರ್‌ ಕಮಿಟಿ ಅಥವಾ ಕೇಂದ್ರದ ವರಿಷ್ಠರ ಮಟ್ಟದಲ್ಲಾಗಲಿ ಎಲ್ಲೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಎರಡೂ ಇರಬೇಕು. ಹಾಗಾಗಿ ಕೆಲವರು ಸಚಿವರಾಗುವ ಅಪೇಕ್ಷೆ ತೋರಿಸಿದ್ದಾರೆ. ಆದರೆ ಯಾರು ಸಚಿವ ಸಂಪುಟದಲ್ಲಿ ಇರಬೇಕು ಎಂಬುದನ್ನು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ನಳಿನ್‌ ತಿಳಿಸಿದರು.

ಭಯೋತ್ಪಾದನೆಗೆ ಬೆಂಬಲ ಸಹಿಸುವುದಿಲ್ಲ
ಮಂಗಳೂರು ನಗರದ ಬಿಜೈಯಲ್ಲಿ ಗುರುವಾರ ರಾತ್ರಿ ಕಿಡಿಗೇಡಿಗಳು ಭಯೋತ್ಪಾದನೆಯನ್ನು ಬೆಂಬಲಿಸಿ ಬರಹವನ್ನು ಬರೆದಿದ್ದಾರೆ. ಆದರೆ ರಾಜ್ಯದಲ್ಲಿ, ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಇಂತಹ ಯಾವುದೇ ಕೃತ್ಯವನ್ನು ನಾವು ಸಹಿಸಲು ಸಾಧ್ಯವೇ ಇಲ್ಲ. ಈ ಬಗ್ಗೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ತೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಎಂ., ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಡಾ.ವೈ.ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಎಂಎಲ್‌ಸಿ ಪ್ರತಾಪ್‌ಸಿಂಹ ನಾಯಕ್‌, ಮೇಯರ್‌ ದಿವಾಕರ ಪಾಂಡೇಶ್ವರ, ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *