ಜಮ್ಮು-ಕಾಶ್ಮೀರದಲ್ಲಿ ಶೀಘ್ರದಲ್ಲಿ ಚುನಾವಣೆ ನಡೆಸಿ – ರಾಜ್ಯ ಸ್ಥಾನಮಾನ ಮರಳಿ ನೀಡಿ; ಫಾರೂಕ್ ಅಬ್ದುಲ್ಲಾ

ಜಮ್ಮು: ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡಬೇಕು, ಸಾರ್ವತ್ರಿಕ ಚುನಾವಣೆಗಳನ್ನು ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಮರಳಿ ರಾಜ್ಯ ಸ್ಥಾನಮಾನ ಸ್ಥಾಪಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.

ಶನಿವಾರ(ಮಾರ್ಚ್‌ 11) ಹತ್ತಕ್ಕೂ ಹೆಚ್ಚು ಪಕ್ಷಗಳ ನಾಯಕರೊಂದಿಗಿನ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ವಿಧಾನಸಭಾ ಚುನಾವಣೆ ಮತ್ತು ರಾಜ್ಯದ ಸ್ಥಾನಮಾನವನ್ನು ಮರಳಿ ಸ್ಥಾಪಿಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಿದರು.

ಪ್ರಚಲಿತ ಪರಿಸ್ಥಿತಿ, ಜನರ ನಡುವಿನ ಅಶಾಂತಿ ಮತ್ತು ಮುಂದಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ. ಎಲ್ಲಾ ನಾಯಕರು ತಮ್ಮ ದೃಷ್ಟಿಕೋನವನ್ನು ಮುಂದಿಟ್ಟರು ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ನಾವು ದೆಹಲಿಗೆ ಹೋಗಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವುದಾಗಿ ನಿರ್ಧರಿಸಿದರು.

ಇದನ್ನು ಓದಿ: ಜಮ್ಮು ಕಾಶ್ಮೀರದಲ್ಲಿ ದಾಖಲೆ ರಹಿತ ಮತದಾನ ಹಕ್ಕು: ನ್ಯಾಯಾಲಯದ ವಿವಾದಿತ ಆದೇಶ ರದ್ದು

ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಜಮ್ಮು ಕಾಶ್ಮೀರದಲ್ಲಿ ಶಾಂತಿ ಇದೆ ಎಂದು ಹೇಳುತ್ತಾರೆ, ಇದು ನಿಜವಾಗಿದ್ದರೆ, ಅವರು ವಿಧಾನಸಭೆ ಚುನಾವಣೆಯನ್ನು ಏಕೆ ನಡೆಸುವುದಿಲ್ಲ? ಎಂದು ಫಾರುಕ್‌ ಅಬ್ದುಲ್ಲಾ ಅವರು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಇದುವರೆಗೂ ಏಕೆ ಚುನಾವಣೆಯನ್ನು ನಡೆಸಿಲ್ಲ ಎಂದು ಕೇಂದ್ರವನ್ನು ಪ್ರಶ್ನಿಸಿದ ಅವರು, ಇದು ತುಂಬಾ ವಿಚಿತ್ರವಾಗಿದೆ. ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಇಲ್ಲಿನ ಜನರು ಇದೇ ರಾಷ್ಟ್ರಕ್ಕೆ ಸೇರಿದವರು. ಹೀಗಾಗಿ ಈ ಹಿಂದಿನ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕು. ನಿಗದಿತ ಅವಧಿಗೆ ಚುನಾವಣೆಗಳು ನಡೆಸಬೇಕೆಂದು ಒತ್ತಾಯಿಸಿದರು.

2014ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ವಿಧಾನಸಭಾ ಚುನಾವಣೆಗಳು ನಡೆದವು ಮತ್ತು ಚುನಾಯಿತ ಸರ್ಕಾರವನ್ನು ವಜಾಗೊಳಿಸಿದ ಆರು ತಿಂಗಳೊಳಗೆ ಚುನಾವಣೆಯನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ಇದೆ. ಜನಸಾಮಾನ್ಯರು ಮತ್ತೆ ಜನಪರ ಸರ್ಕಾರವನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಜಮ್ಮು ಕಾಶ್ಮೀರ ಜನತೆ ಮೇಲಿನ ಕ್ರೌರ್ಯ ನ್ಯಾಯಾಂಗ ಗಮನಿಸುತ್ತಿಲ್ಲ: ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ಕೇಂದ್ರ ಸರ್ಕಾರ ತನ್ನ ಭರವಸೆಯನ್ನು ವಿಫಲವಾಗಿದೆ ಎಂದು ತಿಳಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ 50,000 ಉದ್ಯೋಗಗಳನ್ನು ನೀಡದಿರುವ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ನೀವು ಇದುವರೆಗೂ ಇಲ್ಲಿನ ಯುವಕರಿಗೆ ಎಷ್ಟು ಉದ್ಯೋಗಗಳನ್ನು ನೀಡಿದ್ದೀರಿ. ಬುಲ್ಡೋಜರ್ ರಾಜಕೀಯ, ಭ್ರಷ್ಟಾಚಾರದಿಂದಾಗಿ ಜನರ ಮೇಲೆ ಆಸ್ತಿ ತೆರಿಗೆ ವಿಧಿಸಲಾಗುತ್ತಿದೆ. ಇದೆಲ್ಲಾ ಏನು” ಎಂದು ಪ್ರಶ್ನಿಸಿದರು.

“ಕಾಶ್ಮೀರದ ಯುವಕರು ಉದ್ಯೋಗ ವಂಚಿತರಾಗಿದ್ದಾರೆ ಉದ್ಯೋಗವನ್ನು ಹುಡುಕಿಕೊಂಡು ಹೊರಗಡೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅವರಿಗೆ ಇಲ್ಲಿಯೇ ಉದ್ಯೋಗ ಮಾಡುವ ಹಕ್ಕಿಲ್ಲವೇ? ಕಾಶ್ಮೀರದ ಯುವಕರು ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ ಎಂದು ಆರೋಪಿಸಿದರು. ಈ ವಿಷಯಗಳ ಕುರಿತೂ ಸರ್ಕಾರದ ಜೊತೆ ಚರ್ಚಿಸಲಾಗುವುದು. ಸಂಸತ್ತಿನ ಒಳಗೂ ಇದನ್ನು ಪ್ರಸ್ತಾಪಿಸುತ್ತೇವೆ. ನಮ್ಮ ಜನರ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಲು ಬಯಸುತ್ತೇವೆʼʼ ಎಂದು ಹೇಳಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *