ಎನ್‌ಸಿಪಿ ಇಬ್ಬಾಗ : ಶಿಂಧೆ ಸರ್ಕಾರಕ್ಕೆ ಬೆಂಬಲ, ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ

ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು,  ಎನ್‌ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದಾರೆ.  ಈ ಮೂಲಕ ಎನ್ಸಿಪಿ ಇಬ್ಬಾಗವಾಗುವ ಸೂಚನೆ ದಟ್ಟವಾಗಿದೆ.

ಸಾರ್ವಜನಿಕವಾಗಿ ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಪವಾರ್ ಈ ಹೆಜ್ಜೆ ಇಟ್ಟಿದ್ದಾರೆ. 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಸಮಾಧಾನಕ್ಕೆ ಕಾರಣ?

ಕೆಲ ದಿನಗಳ ಹಿಂದೆ ಎನ್‌ಸಿಪಿಯಲ್ಲಿ ನಾಯಕತ್ವ ಬದಲಾವಣೆ ಆಗಿತ್ತು. ಪಕ್ಷದ ಕಾರ್ಯಾಧ್ಯಕ್ಷರಾಗಿ ಶರದ್​ ಪವಾರ್​ ಮಗಳಾದ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಾಟೇಲ್ ಅವರನ್ನು ನೇಮಿಸಲಾಗಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಅಜಿತ್ ಪವಾರ್ ಬಂಡಾಯವೆದ್ದಿದ್ದರು. ಇದೀಗ ತಮ್ಮ 30 ಶಾಸಕರ ಬೆಂಬಲದೊಂದಿಗೆ ಅಜಿತ್ ಪವಾರ್ ಎನ್​ಡಿಎ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ಏಕನಾಥ್ ಶಿಂಧೆ 40 ಸೇನಾ ಶಾಸಕರೊಂದಿಗೆ ಹೊರನಡೆದು ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ವರ್ಷದ ನಂತರ ಎನ್‌ಸಿಪಿಯಲ್ಲಿನ ಬಿಕ್ಕಟ್ಟು ಮಹಾರಾಷ್ಟ್ರದಲ್ಲಿ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆಯ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ದುರ್ಬಲಗೊಳಿಸಿದೆ.

ಶರದ್ ಪವಾರ್ ಜೊತೆ ನಾವಿದ್ದೇವೆ – ಸಂಜಯ್ ರಾವತ್ : ”ಬಿಜೆಪಿ ಯಾರನ್ನೆಲ್ಲಾ ಜೈಲಿಗೆ ಕಳಿಸುತ್ತಿತ್ತೋ ಅವರೆಲ್ಲರೂ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆ ಬಗ್ಗೆ ಉದ್ಧವ್ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್, ”ಜನರು ಈ ಆಟವನ್ನು ಹೆಚ್ಚು ದಿನ ಸಹಿಸುವುದಿಲ್ಲ, ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಬಲಿಷ್ಠರಿದ್ದಾರೆ. ಜನರ ಬೆಂಬಲವೂ ಅವರ ಮೇಲಿದೆ. ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಪುನರ್ ನಿರ್ಮಿಸುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *