ಎನ್‌ಡಿಎ ಸರ್ಕಾರ ಎಷ್ಟು ದಿನ ಇರುತ್ತೆ ಎಂಬುದು ಖಚಿತವಿಲ್ಲ- ಎಂ.ಬಿ.ಪಾಟೀಲ

ಬೆಂಗಳೂರು: ಎನ್‌ಡಿಎ ಒಕ್ಕೂಟದ ಈ ಕೇಂದ್ರ ಸರ್ಕಾರಕ್ಕೆ ಎಷ್ಟು ದಿನ ಭವಿಷ್ಯ ಇದೆಯೋ ಗೊತ್ತಿಲ್ಲ. ಈ ಸರ್ಕಾರ ಇನ್ನೆಷ್ಟು ದಿನ ಇರುತ್ತದೆಯೋ ಎನ್ನುವುದು ಖಚಿತವಿಲ್ಲ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ, ನಿತೀಶ್ ಕುಮಾರ್ ರಂತಹ ವ್ಯಕ್ತಿಯನ್ನಿಟ್ಟುಕೊಂಡು ಸರಕಾರ ನಡೆಸುವುದು ಕಷ್ಟ.‌ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್ ಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ.ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಈ ಮೊದಲೇ ಹೇಳಿದಂತೆ ಆಗಿದೆ ಎಂದು ಎಂ.ಬಿ.ಪಾಟೀಲ ಹೇಳಿದರು.

ಇದನ್ನೂ ಓದಿಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸಿಗೆ ಕನಿಷ್ಠ 14 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತಾದರೂ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿದೆ. ಹಿನ್ನಡೆಗೆ ಕಾರಣಗಳೇನೆಂಬುದನ್ನು ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಲಲಿದೆ.’ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತಾದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ’ ಎಂಬುದನ್ನು ಎಂ.ಬಿ.ಪಾಟೀಲ ಸ್ಪಷ್ಟಪಡಿಸಿ,

ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿ ಎಂದಷ್ಟೇ ಚಿಂತಿಸಲಾಗುವುದು ಎಂದರು.

Donate Janashakthi Media

Leave a Reply

Your email address will not be published. Required fields are marked *